

ಮಂಡ್ಯ: ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸಭಾ ಸದಸ್ಯರ ಹಕ್ಕುಚ್ಯುತಿಗೆ ಸಂಬಂಧಿಸಿದಂತೆ ಕಾನೂನು ಕ್ರಮ ತೆಗೆದುಕೊಳ್ಳದಿದ್ದರೆ ಜು.8ರಿಂದ ನಗರದಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶ್ ತಿಳಿಸಿದರು.
ಬೂದನೂರು ಗ್ರಾಪಂ ಆಡಳಿತದಲ್ಲಿ ಹಲವು ಲೋಪದೋಷದ ಜತೆಗೆ ಅಕ್ರಮ ನಡೆದಿದೆ. ಈ ಸಂಬಂಧ ಜು.10ರಿಂದ ಪ್ರತಿಭಟಿಸಿ ಜಿಪಂ ಸಿಇಒಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಪ್ರಶ್ನಿಸಿದ ಕಾರಣಕ್ಕೆ ಆಡಳಿತ ನಡೆಸಲು ತೊಂದರೆಯಾಗುತ್ತಿದೆ ಸದಸ್ಯರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಸಭಾ ಸದಸ್ಯರ ಹಕ್ಕುಚ್ಯುತಿಯಾಗುತ್ತಿದ್ದು, ನಮ್ಮ ಆರೋಪಕ್ಕೆ ಸಂಬಂಧಿಸಿದಂತೆ ಕ್ರಮ ವಹಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.