ಅಂಗನವಾಡಿಗಳಿಗೆ ಜಿಪಂ ಸಿಇಒ ದಿಢೀರ್ ಭೇಟಿ

31M.D.R.5 (1)
Published on

ಮದ್ದೂರು: ತಾಲೂಕಿನ ಸೋಮನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಬುಧವಾರ ದಿಢೀರ್ ಭೇಟಿ ನೀಡಿ ಅಂಗನವಾಡಿಯ ಮೂಲ ಸೌಕರ್ಯ ಪರಿಶೀಲಿಸಿದರು.


ಈ ವೇಳೆ ಅಡುಗೆ ಮನೆಗೆ ತೆರಳಿ ಆಹಾರದ ಗುಣಮಟ್ಟ ಪರಿಶೀಲಿಸಿ ಅಡುಗೆ ಮನೆಯನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಿದರು. ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕಾಂಶ ಹೊಂದಿರುವ ಆಹಾರ ನೀಡಬೇಕು ಎಂದರು.


ನಂತರ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಭೇಟಿ ನೀಡಿ ಕಚೇರಿ ಕಾರ್ಯಗಳು, ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಮಾಡಿರುವ ಬಗ್ಗೆ ತಾಪಂ ಇಒ ಎಲ್. ಸಂದೀಪ್ ಅವರಿಂದ ಮಾಹಿತಿ ಪಡೆದುಕೊಂಡರು. ಸಾರ್ವಜನಿಕ ಸಮಸ್ಯೆ ಕುರಿತು ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರ ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು.


ಇದಾದ ಬಳಿಕ ಸೋಮನಹಳ್ಳಿ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ-ಉಪಕೇಂದ್ರಕ್ಕೆ ತೆರಳಿ ಶುಚಿತ್ವ, ಔಷಧ ದಾಸ್ತಾನು ಪರಿಶೀಲಿಸಿ ಉತ್ತಮ ಚಿಕಿತ್ಸೆ ಒದಗಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್, ಸಿಡಿಪಿಒ ನಾರಾಯಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net