ಚಾಮುಂಡೇಶ್ವರಿ ಮಾತೆಯ ಉತ್ಸವ

IMG-20250719-WA0117
Published on

* ಆಷಾಢ ಮಾಸದ ಕೊನೆಯ ಶುಕ್ರವಾರ ಸಂಭ್ರಮ

ಗುಂಡ್ಲುಪೇಟೆ : ಪಟ್ಟಣದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಮಾತೆಯ ಉತ್ಸವ ವಿಜೃಂಭಣೆಯಿಂದ ನೆರವೇರಿತು.

ಪೂಜಾ ಕಾರ್ಯದ ಹಿನ್ನೆಲೆಯಲ್ಲಿ ದೇವಾಲಯ ಹಾಗೂ ಪ್ರಮುಖ ಬೀದಿಗಳನ್ನು ತಳಿರು-ತೋರಣ, ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಇಲ್ಲಿನ ಭಾವಸಾರ ಕ್ಷತ್ರಿಯ ಮಂಡಳಿ ವತಿಯಿಂದ ಬೆಳ್ಳಿ ರಥದಲ್ಲಿ ಶ್ರೀ ಚಾಮುಂಡೇಶ್ವರಿ ಮಾತೆ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಮಂಗಳವಾದ್ಯ, ಕೇರಳದ ಚಂಡೆ, ಡೊಳ್ಳು, ಜಾನಪದ ತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು. ನಂತರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಸುಬ್ರಹ್ಮಣ್ಯ, ಭಾವಸಾರ ಕ್ಷತ್ರಿಯ ಮಂಡಳಿಯ ಪದಾಧಿಕಾರಿಗಳು, ಯುವಕರು, ಮಹಿಳೆಯರು ಸೇರಿದಂತೆ ಪಟ್ಟಣದ ವಿವಿಧ ಭಾಗಗಳ ಭಕ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net