

ಗುಂಡ್ಲುಪೇಟೆ : ಭೀಮನ ಅಮಾವಾಸ್ಯೆ ಅಂಗವಾಗಿ ಪಟ್ಟಣ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಪಟ್ಟಣದ ರಾಮೇಶ್ವರ ದೇವಾಲಯದಲ್ಲಿ ಪ್ರಧಾನ ಅರ್ಚಕ ಶಂಕರನಾರಾಯಣ ಜೋಯಿಸ್ ನೇತೃತ್ವದಲ್ಲಿ ಶಿವಲಿಂಗಕ್ಕೆ ಭಸ್ಮಾಲಂಕಾರ ಮಾಡಿ ಜ್ಯೋತಿರ್ಭೀಮೇಶ್ವರ ಪೂಜೆ ನೆರವೇರಿಸಲಾಯಿತು. ಶ್ರೀ ಕಾಳಿಕಾಂಬಾ ಕಮಠೇಶ್ವರ ದೇವಾಲಯಲ್ಲಿ ವಿಶೇಷ ಪೂಜೆ ಸಮರ್ಪಿಸಲಾಯಿತು. ನಂತರ ದೇವಿಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯ ವೀರಗಾಸೆ ಸೇರಿದಂತೆ ಜಾನಪದ ಕಲಾ ಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು ವಿಶೇಷ ಪೂಜಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ವಿಶ್ವಕರ್ಮ ಸಮದಾಯದ ಮುಖಂಡರು, ಯುವಕರು ಪದಾಧಿಕಾರಿಗಳು ಹಾಗೂ ಮಹಿಳೆಯರು ಭಾಗವಹಿಸಿದ್ದರು.ದೇವಾಲಯವನ್ನು ವಿದ್ಯುತ್ ದೀಪ ಹಾಗೂ ತಳಿರು, ತೋರಣಗಳಿಂದ ಸಿಂಗರಿಸಿದ್ದು ಗಮನ ಸೆಳೆಯಿತು.