ಚಾಮುಂಡೇಶ್ವರಿ ದೇವಿಯ ಉತ್ಸವ

GPT- Pooje
Published on

ಗುಂಡ್ಲುಪೇಟೆ: ಪಟ್ಟಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಭಾವಸಾರ ಕ್ಷತ್ರಿಯ ಮಂಡಳಿಯ ವತಿಯಿಂದ ಚಾಮುಂಡೇಶ್ವರಿ ದೇವಿಯ ಉತ್ಸವ ಹಾಗೂ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು. ಆಷಾಢ ಮಾಸದ ಕಡೇ ಶುಕ್ರವಾರದ ಹಿನ್ನೆಲೆಯಲ್ಲಿ ವಿವಿಧ ಹೂಗಳಿಂದ ಅಲಂಕೃತಗೊಂಡಿದ್ದ ಬೆಳ್ಳಿ ರಥದಲ್ಲಿ ದೇವಿಯ ಉತ್ಸವಮೂರ್ತಿಯನ್ನು ಇರಿಸಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭ ಭಾವಸಾರ ಕ್ಷತ್ರಿಯ ಮಂಡಳಿ ಪ್ರಮುಖರು, ಪಟ್ಟಣದ ಯುವಕರು ಹಾಗೂ ಮಾತೆಯರು ಭಾಗವಹಿಸಿದ್ದರು. ದೇವಾಲಯದಲ್ಲಿ ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net