ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಪದವಿ ಪ್ರದಾನ

29 gkp .03
ಗೋಣಿಕೊಪ್ಪಲು ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ನಡೆದ ಪದವಿ ಸಮಾರಂಭದಲ್ಲಿ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡಾ.ಕೆ.ಸಿ. ಪೊನ್ನಪ್ಪ ಪದವಿ ಪ್ರದಾನ ಮಾಡಿದರು. ಪ್ರೊ.ಎಂ.ಡಿ.ಸಂಜುಂಡ ಮತ್ತಿತರರು ಉಪಸ್ಥಿತರಿದ್ದರು.
Published on

ಗೋಣಿಕೊಪ್ಪ: ವಿದ್ಯಾರ್ಥಿಗಳಿಗೆ ಪ್ರತಿ ಕ್ಷಣವೂ ಅಮೂಲ್ಯ. ತಂತ್ರಜ್ಞಾನದ ಯುಗದಲ್ಲಿ ಪ್ರಗತಿ ಹೊಂದಬೇಕಾದರೆ ಹೆಚ್ಚಿನ ಶ್ರಮ ಅಗತ್ಯ ಎಂದು ವಿರಾಜಪೇಟೆ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡಾ.ಕೆ.ಸಿ. ಪೊನ್ನಪ್ಪ ಹೇಳಿದರು.

ಗೋಣಿಕೊಪ್ಪಲು ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಎಂದೆಂದಿಗೂ ಕಂಡರಿಯದ ರೀತಿಯಲ್ಲಿ ಸ್ಪರ್ಧೆಗಳು ಎಲ್ಲ ರಂಗದಲ್ಲಿಯೂ ಏರ್ಪಟ್ಟಿವೆ. ಉತ್ತಮವಾಗಿ ಓದಿದರೆ ಮಾತ್ರ ಸ್ಪರ್ಧೆಯ ಕಣದಲ್ಲಿ ಉಳಿಯಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಎಂ.ಡಿ.ನಂಜುಂಡ ಮಾತನಾಡಿ, ಯುವಕರು ಯಾವುದೇ ಸಂದರ್ಭದಲ್ಲಿ ಎದೆಗುಂದಬಾರದು. ಮೊದಲು ತಮ್ಮ ಬಗ್ಗೆ ಆತ್ಮವಿಶ್ವಾಸವಿರಬೇಕು. ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ, ಪರಿಣಾಮಕಾರಿ ಬೋಧನೆ, ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಅವರು ಅದ್ಭುತ ಸಾಧನೆಗಳನ್ನು ಇಂದಿಗೂ ಮಾಡುತ್ತಿದ್ದಾರೆ. ಇದು ಎಲ್ಲರಿಗೂ ಸ್ಫೂರ್ತಿಯಾಗಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net