26ರಂದು ಉಜಿರೆ ಕಾಲೇಜಿನಲ್ಲಿ ಪದವಿ ಪ್ರದಾನ

Published on

ಬೆಳ್ತಂಗಡಿ: ಯುಜಿಸಿಯಿಂದ ಸ್ವಾಯತ್ತ ಸಂಸ್ಥೆ ಎಂಬ ಮಾನ್ಯತೆಗೆ ಪಾತ್ರವಾಗಿರುವ ಉಜಿರೆಯ ಶ್ರೀ ಧ.ಮಂ. ಕಾಲೇಜಿನ 2023-24ನೇ ಸಾಲಿನ ಪದವಿ ಪ್ರದಾನ ಸಮಾರಂಭ ಅ.26ರಂದು ನಡೆಯಲಿದೆ.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದು, ಗುಲ್ಬರ್ಗ ವಿವಿಯ ಮಾಜಿ ಕುಲಪತಿ ಪ್ರೊ. ಎಸ್.ಆರ್.ನಿರಂಜನ ಮುಖ್ಯ ಭಾಷಣ ಮಾಡಲಿದ್ದಾರೆ. ಮಂಗಳೂರು ವಿವಿ ಉಪ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ಮತ್ತು ಡಿ.ಸುರೇಂದ್ರ ಕುಮಾರ್ ಹಾಗೂ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್ ಮತ್ತು ಡಾ.ಸತೀಶ್ಚಂದ್ರ ಎಸ್. ಸಮಾರಂಭದಲ್ಲಿ ಉಪಸ್ಥಿತರಿರುವರು.

ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ವಿಶೇಷ ಸಮಾರಂಭದಲ್ಲಿ 2023-24ನೇ ಸಾಲಿನ 300 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ 30 ಪದವಿಯ ವಿವಿಧ ವಿಭಾಗಗಳ ರ‌್ಯಾಂಕ್ ವಿಜೇತರಿಗೆ ಪದವಿ ಗೌರವ ನೀಡಿ ಪುರಸ್ಕರಿಸಲಾಗುವುದು ಎಂದು ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net