ಪದವಿ ಮುಗಿಸಿದವರಿಗೆ ಯುವನಿಧಿ ಸಹಕಾರಿ

19SND-02
ಸಿಂಧನೂರಿನಲ್ಲಿ ಯುವನಿಧಿ ಯೋಜನೆ ನೋಂದಣಿಗೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು. ಜಿಲ್ಲಾ ಉದ್ಯೋಗ ಅಧಿಕಾರಿ ನವೀನಕುಮಾರ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವೈ.ಅನಿಲಕುಮಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಚಾರ್ಯ ಎಂ.ಶಿವಯ್ಯ ಇದ್ದರು.
Published on

ಸಿಂಧನೂರು: ಪದವಿ ಮುಗಿದ ತಕ್ಷಣ ಕೆಲಸ ಸಿಗದ ಯುವಜನತೆಗಾಗಿ ಸರ್ಕಾರ ಜಾರಿಗೊಳಿಸಿರುವ ಯುವನಿಧಿ ಯೋಜನೆ ಉಪಯುಕ್ತವಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು. ಈ ಯೋಜನೆಗೆ ತಾಲೂಕಿನಿಂದ 3500 ಅರ್ಜಿ ಸಲ್ಲಿಕೆಯಾಗಿವೆ.

ಪದವಿ ಮುಗಿಸಿದವರಿಗೆ ಸರ್ಕಾರ ನೀಡುವ ಮೂರು ಸಾವಿರ ರೂ.ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಸಹಕಾರಿಯಾಗಿದೆ. ಕೆಲ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ದುಶ್ಚಟಗಳಿಂದ ದೂರಾಗಿ ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದರು.

ಜಿಲ್ಲಾ ಉದ್ಯೋಗ ಅಧಿಕಾರಿ ನವೀನಕುಮಾರ ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ 13,615 ಜನರು ನೋಂದಣಿ ಮಾಡಿಸಿಕೊಂಡಿದ್ದು, ಈ ಪೈಕಿ 8,500 ಜನಕ್ಕೆ ಪ್ರತಿ ತಿಂಗಳು ಯುವನಿಧಿ ಹಣ ಜಮೆ ಆಗುತ್ತಿದೆ. 3,352 ಜನರ ನೋಂದಣಿಯಿಂದ ಸಿಂಧನೂರು ತಾಲೂಕು ಪ್ರಥಮ ಸ್ಥಾನದಲ್ಲಿದೆ. ರಾಜ್ಯದಲ್ಲಿ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವೈ.ಅನಿಲಕುಮಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಂ.ಶಿವಯ್ಯ, ಸಿಡಿಸಿ ಸದಸ್ಯರಾದ ಶರಣಪ್ಪ ಉಪ್ಪಲದೊಡ್ಡಿ, ತಿಮ್ಮಣ್ಣ ಸಾಹುಕಾರ ಕುರುಕುಂದ, ರಾಜೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net