ಮೈಸೂರಿನ ಎಟಿಎಂಇ ಇಂನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ATME
Published on

ಮೈಸೂರು: ನಗರದ ಬನ್ನೂರು ರಸ್ತೆಯ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವೀಧರರ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ವೆಂಕಟೇಶ್ ರಾಯ್ಕರ್ ವಿವಿಧ ವಿಭಾಗಗಳಲ್ಲಿ ಇಂಜಿನಿಯರಿಂಗ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ದೇಶ ತಂತ್ರಜ್ಞಾನ ಕ್ಷೇತ್ರದಲ್ಲಿ ಶರವೇಗದಲ್ಲಿ ಬೆಳೆಯುತ್ತಿದ್ದು, ಎಲ್ಲ ವಿಭಾಗಗಳ ಇಂಜಿನಿಯರಿಂಗ್ ಕ್ಷೇತ್ರಗಳಲ್ಲೂ ಸಾಕಷ್ಟು ಅವಕಾಶಗಳಿವೆ. ಆದರೆ ವಿದ್ಯಾರ್ಥಿಗಳು ಬದಲಾಗುತ್ತಿರುವ ತಂತ್ರಜ್ಞಾನ ಕ್ಷೇತ್ರಕ್ಕೆ ತಕ್ಕಂತೆ ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮ ಮತ್ತು ನಿರಂತರ ಕಲಿಕೆಯಿಂದ ಅಂದುಕೊಂಡ ಸಾಧನೆ ಮಾಡಬಹುದು ಎಂದು ಕಿವಿಮಾತು ಹೇಳಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಲ್. ಅರುಣ್ ಕುಮಾರ್, ಪದಾಧಿಕಾರಿಗಳಾದ ಕೆ.ಶಿವಶಂಕರ್, ಆರ್. ವೀರೇಶ್, ಎಚ್.ವೆಂಕಟೇಶ್, ಧೀರೇಂದ್ರ ಆರ್. ಮೆಹ್ತಾ, ಎಸ್‌ಜೆಸಿಇ ನಿವೃತ್ತ ಪ್ರಾಂಶುಪಾಲ ಡಾ.ಸೈಯ್ಯದ್ ಶಕೀಬ್ ಉರ್ ರೆಹಮನ್, ಎಟಿಎಂಇ ಕಾಲೇಜು ಪ್ರಾಂಶುಪಾಲ ಡಾ.ಎಲ್. ಬಸವರಾಜ್, ವಿವಿಧ ವಿಭಾಗಗಳ ಡೀನ್‌ಗಳಾದ ಡಾ.ಎಂ.ಎಸ್. ಗೋವಿಂದೇಗೌಡ, ಡಾ.ಭಾಗ್ಯಶ್ರೀ, ಕಾರ್ಯಕ್ರಮ ಸಂಯೋಜಕ ಡಾ.ಪಿ.ಕೆ.ಮಹೇಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net