ಉಗ್ರ ಗೋಡೆ ಬರಹ, ಓರ್ವನ ಬಂಧನ

Mangaluru wall writing
Published on

ಮಂಗಳೂರು: ನಗರದ ಎರಡು ಕಡೆಗಳಲ್ಲಿ ಉಗ್ರ ಪರವಾದ ಗೋಡೆ ಬರಹಗಳನ್ನು ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕದ್ರಿ ಪೊಲೀಸರು ತೀರ್ಥಹಳ್ಳಿ ಮೂಲದ ಓರ್ವನನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ತೀರ್ಥಹಳ್ಳಿಯ ನಝೀರ್‌ ಮೊಹಮ್ಮದ್‌ ಎಂಬಾತ ಬಂಧಿತ. ಈತ ಫುಡ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡಿಕೊಂಡಿದ್ದ. ಸಿಸಿಟಿವಿ ಕ್ಯಾಮೆರಾದಲ್ಲಿ ಸಿಕ್ಕಿರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ಮಾಡಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ನಝೀರ್‌ ಮಂಗಳೂರಿನಲ್ಲೇ ಕೆಲಸ ಮಾಡಿಕೊಂಡಿದ್ದ. ಪ್ರಕರಣದಲ್ಲಿ ಇನ್ನೂ ಓರ್ವ ಆರೋಪಿ ಭಾಗಿಯಾಗಿರುವ ಮಾಹಿತಿ ಇದ್ದು ಶೀಘ್ರ ಬಂಧಿಸುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net