

ಹುಬ್ಬಳ್ಳಿ: ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಸೌಕರ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿಯ ತಾಲೂಕು ಆಡಳಿತ ಸೌಧ ಎದುರು ನಡೆದಿರುವ ಪ್ರತಿಭಟನೆ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.
ನಾಲ್ಕನೇ ದಿನದ ಮುಷ್ಕರದಲ್ಲಿ ಹಲವು ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು ಪ್ರತಿಭಟನೆ ನಿರತರ ಬೇಡಿಕೆ ಈಡೇರಿಸಲು ಮನವಿ ಮಾಡಿದರು.
ರಾಜ್ಯ ನೌಕರರ ಸಂಘ ಹುಬ್ಬಳ್ಳಿ ತಾಲೂಕು ಅಧ್ಯಕ್ಷ ವಿ.ಎ್. ಚುಳಕಿ ಮತ್ತು ನಗರ ಘಟಕದ ಅಧ್ಯಕ್ಷ ಪ್ರಹ್ಲಾದ ಗೆಜ್ಜಿ, ರಾಜ್ಯ ಸರ್ಕಾರಿ ನೌಕರರ ಸಂಘದ ಪರಿಷತ್ ಸದಸ್ಯ ಪರಮಾನಂದ ಶಿವಳ್ಳಿಮಠ, ಖಜಾಂಚಿ ವೈ.ಎಚ್. ಬಣವಿ, ಕಾರ್ಯದರ್ಶಿ ಮಾರುತಿ ನಾಗಾವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಚ್. ಜಂಗ್ಲಿ, ಪದಾಧಿಕಾರಿಗಳು, ಸರ್ವೇ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಖಜಾನೆ ಇಲಾಖೆ, ನಗರ ಮತ್ತು ಗ್ರಾಮೀಣ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಕಂದಾಯ ನಿರೀಕ್ಷರು, ಗ್ರಾಮ ಸಹಾಯಕ ಸಂಘದ ಅಧ್ಯಕ್ಷರು ಮತ್ತು ಗ್ರಾಮ ಸಹಾಯಕರು ಮುಷ್ಕರದಲ್ಲಿ ಭಾಗವಹಿಸಿದ್ದರು.