ಗ್ರಾಪಂ ಉಪ ಚುನಾವಣೆ ಘೋಷಣೆ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ, ಶಿವಳ್ಳಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ, ಸೂರಶೆಟ್ಟಿಕೊಪ್ಪ, ನವಲಗುಂದ ತಾಲೂಕಿನ ಶಿರಕೋಳ, ಯಮನೂರ ಹಾಗೂ ಕುಂದಗೋಳ ತಾಲೂಕಿನ ಹಿರೇಹರಕುಣಿ ಸೇರಿ 8 ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ, ಖಾಲಿ ಇರುವ ಗ್ರಾಪಂ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ದೆಶಿಸಿದೆ.

ನಾಮಪತ್ರ ಸಲ್ಲಿಸಲು ಏ. 28 ಕೊನೆ ದಿನವಾಗಿದೆ. ಏ. 29 ನಾಮಪತ್ರ ಪರಿಶೀಲನೆ, ಮೇ 2ರಂದು ಉಮೇದುವಾರಿಕೆ ಹಿಂಪಡೆಯಲು ಕೊನೇ ದಿನ. ಮತದಾನ ಅವಶ್ಯವಿದ್ದರೆ ಮೇ 11ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಸಲಾಗುತ್ತದೆ. ಮರು ಮತದಾನ ಅವಶ್ಯವಿದ್ದರೆ ಮೇ 13ರಂದು ಜರುಗಿಸಲಾಗುವುದು. ಮೇ 14 ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಮೇ 14ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.

ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ಏ. 22ರಿಂದ ಮೇ 14ರವರೆಗೆ ಜಾರಿಯಲ್ಲಿರುತ್ತದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡದಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

೦೦೦೦

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net