ಕುಷ್ಟಗಿ: ವಿವಿಧ ಕಾರಣಗಳಿಂದ ತೆರವಾಗಿದ್ದ ತಾಲೂಕಿನ ಗ್ರಾಪಂಗಳ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿ ಮಾಡಿ ತಹಸೀಲ್ದಾರ್ ಅಶೋಕ ಶಿಗ್ಗಾವಿ ಆದೇಶ ಹೊರಡಿಸಿದ್ದಾರೆ.
ತಾಲೂಕಿನ ಜಹಗೀರ ಗುಡದೂರು, ಹನುಮಸಾಗರ, ಗುಮಗೇರಾ ಹಾಗೂ ಸಂಗನಾಳ ಗ್ರಾಪಂ ವ್ಯಾಪ್ತಿಯ ತಲಾ ಒಂದು ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
ಏ.22ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ. ಏ. 28ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಏ.29ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 2ರಂದು ಉಮೇದುವಾರಿಕೆ ಹಿಂಪಡೆಯಲು ಅವಕಾಶವಿದ್ದು, ಅಗತ್ಯವಿದ್ದಲ್ಲಿ ಮೇ 11ರಂದು ಚುನಾವಣೆ ನಡೆಯಲಿದೆ. ಮೇ 14ರಂದು ಮತ ಎಣಿಕೆ ಕಾರ್ಯನಡೆಯಲಿದೆ ಎಂದು ತಿಳಿಸಿದ್ದಾರೆ.