ಸಾಲಗಾರರ ಕಾಟಕ್ಕೆ ಬೇಸತ್ತು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯಿತಿ ಸದಸ್ಯ

Suicide 6 Jan 20
Published on

ರಾಯಚೂರು: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಚೇಡ್​ ಗ್ರಾಮದಲ್ಲಿ ನಡೆದಿದೆ.

ಮಲ್ಲಿಕಾರ್ಜುನ (35) ಮೃತ. ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲಪ್ಪ ಕುರಬರ್​, ಬೂದೆಪ್ಪ ಮತ್ತು ಸುದರ್ಶನ್​ ಎಂಬುವರು ಸಾಲದ ಹಣ ವಾಪಸ್​ ನೀಡುವಂತೆ ಕಿರುಕುಳ ನೀಡುತ್ತಿದ್ದರು ಎಂದು ಡೆತ್​ ನೋಟ್​ನಲ್ಲಿ ತಿಳಿಸಿದ್ದಾರೆ.

ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net