ಕ್ಷೇತ್ರದ ಅಭಿವೃದ್ಧಿಯಿಂದ ಭಕ್ತರ ಇಷ್ಟಾರ್ಥ ಸಿದ್ಧಿ : ಶ್ರೀನಿವಾಸ ಪೂಜಾರಿ ಹೇಳಿಕೆ

New Project (36)
Published on

ವಿಜಯವಾಣಿ ಸುದ್ದಿಜಾಲ ಹಳೆಯಂಗಡಿ

ಪ್ರಸಿದ್ಧ ಕಾರಣಿಕ ಕ್ಷೇತ್ರದ ಅಭಿವೃದ್ಧಿ, ಬ್ರಹ್ಮಕಲಶೋತ್ಸವಕ್ಕೆ ಸರ್ವರ ಸೇವೆ ಬಹಳ ಅಗತ್ಯವಾಗಿದ್ದು, ಶ್ರೀಕ್ಷೇತ್ರದ ಅಭಿವೃದ್ಧಿಯಿಂದ ಭಕ್ತರ ಇಷ್ಟಾರ್ಥ ಸಿದ್ಧಿಯಾಗಲಿದೆ ಎಂದು ದೇವಸ್ಥಾನದ ಆನುವಂಶಿಕ ಮೊಕ್ತೇಸರ ಅಪ್ಪುಯಾನೆ ಶ್ರೀನಿವಾಸ ಪೂಜಾರಿ ಹೇಳಿದರು.

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದಲ್ಲಿ 2026ರಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗ್ರಾಮದ ಭಕ್ತರ ಸಭೆ ದೇವಸ್ಥಾನದಲ್ಲಿ ನಡೆಯಿತು.

ದೇವಸ್ಥಾನದ ನೂತನ ಆಡಳಿತ ಮೊಕ್ತೇಸರರಾಗಿ ಆಯ್ಕೆಯಾದ ಕಟೀಲು ಗಂಪಮನೆ ಚಂದ್ರಶೇಖರ ಬೆಲ್ಚಡ ಅವರನ್ನು ಗೌರವಿಸಲಾಯಿತು. ಚಂದ್ರಶೇಖರ ಬೆಳ್ಚಡ ಮಾತನಾಡಿ, ದೇವಸ್ಥಾನದ ಸಮಗ್ರ ಅಭಿವೃದ್ಧಿಯ ಜತೆಗೆ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು 16 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದರು.

ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್, ಸಾರಂತಾಯ ಗರೋಡಿ ಗೌರವಾಧ್ಯಕ್ಷ ದಯಾನಂದ ಗುರಿಕಾರ, ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ, ಬಿಜೆಪಿ ನಾಯಕರಾದ ಈಶ್ವರ್ ಕಟೀಲ್, ಕಸ್ತೂರಿ ಪಂಜ, ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೊಲ್ನಾಡುಗುತ್ತು, ಸದಾಶಿವ ಶೆಟ್ಟಿ, ಮುರ ವಿಶ್ವನಾಥ ಉಡುಪಿ, ಸಾರಂತಾಯ ಗೆರೋಡಿಯ ಜಗನ್ನಾಥ ಕೋಟ್ಯಾನ್, ಪ್ರಕಾಶ್ ನಿಸರ್ಗ, ಕದಿಕೆ ಮೊಗವೀರ ಸಭಾದ ಗಿರೀಶ್ ಶ್ರೀಯಾನ್, ಬ್ರಾಹ್ಮಣ ಸಭಾದ ಅಧ್ಯಕ್ಷ ಶ್ರೀಕಾಂತ್ ಭಟ್, ಪದ್ಮಶಾಲಿ ಸಭಾದ ಮೋಹನ್ ಶೆಟ್ಟಿಗಾರ್, ಬಪ್ಪನಾಡು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸುನೀಲ್ ಆಳ್ವ, ಪ್ರಸಾದ್ ಶೆಟ್ಟಿ ಮರಕಡ, ನಿರಂಜನ್ ಪೂಜಾರಿ ನಡಿಕುದ್ರು, ನವೀನ್ ಚಂದ್ರ ಪೂಜಾರಿ, ಗೀತಾ ಪಿ.ಕುಮಾರ್, ಶಶೀಂದ್ರ ಸಾಲ್ಯಾನ್, ದಯಾನಂದ ಗುರಿಕಾರ, ಗಣೇಶ್ ಬಂಗೇರ ಹಳೆಯಂಗಡಿ ಮತ್ತಿತರರು ಉಪಸ್ಥಿತರಿದ್ದರು. ರಮೇಶ್ ಬಂಗೇರ ಸ್ವಾಗತಿಸಿದರು. ದೇವಸ್ಥಾನದ ಅಧ್ಯಕ್ಷ ವಾಮನ್ ಇಡ್ಯ ಪ್ರಸ್ತಾವನೆಗೈದರು. ರಾಜೇಂದ್ರಪ್ರಸಾದ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net