ಗ್ರಾಮ ಸ್ವರಾಜ್ಯ ಸ್ವಾವಲಂಬನೆಯ ಪ್ರೇರಕ

ಚನ್ನರಾಯಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧೀಜಿ ಲಾಲ್ ಬಹದ್ದೂರ್ ಶಾಸ್ತ್ರಿ   ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು. ಸಿ.ಎನ್.ಬಾಲಕೃಷ್ಣ, ಸಿ.ಎನ್.ಮೋಹನ್, ಕವಿತಾ ರಾಜು, ಎಸ್.ಎ.ಗಣೇಶ್, ರೇಖಾ ಅನಿಲ್, ಲಕ್ಷ್ಮಮ್ಮ, ರಾಣಿಕೃಷ್ಣ, ಧರಣೇಶ್, ಆರ್.ಯತೀಶ್‌ಕುಮಾರ್ ಇದ್ದರು.
ಚನ್ನರಾಯಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧೀಜಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು. ಸಿ.ಎನ್.ಬಾಲಕೃಷ್ಣ, ಸಿ.ಎನ್.ಮೋಹನ್, ಕವಿತಾ ರಾಜು, ಎಸ್.ಎ.ಗಣೇಶ್, ರೇಖಾ ಅನಿಲ್, ಲಕ್ಷ್ಮಮ್ಮ, ರಾಣಿಕೃಷ್ಣ, ಧರಣೇಶ್, ಆರ್.ಯತೀಶ್‌ಕುಮಾರ್ ಇದ್ದರು.
Published on

ಚನ್ನರಾಯಪಟ್ಟಣ: ಮಹಾತ್ನ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕರೆ ಇಂದಿಗೂ ಪ್ರಸ್ತುತವಾಗಿದ್ದು, ಭಾರತದಂತಹ ಅಭಿವೃದ್ಧಿಶೀಲ ದೇಶಗಳು ಸ್ವಾವಲಂಬನೆಯಾಗಲು ಪ್ರೇರಕವಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.

ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121ನೇ ಜಯಂತ್ಯುತ್ಸವದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಪ್ರತಿಯೊಂದಕ್ಕೂ ವಿದೇಶವನ್ನೇ ಅವಲಂಬಿಸುವ ಕೆಟ್ಟ ಸಂಸ್ಕೃತಿಗೆ ಗಾಂಧೀಜಿ ಅಂದಿನ ದಿನಗಳಲ್ಲೇ ವಿರೋಧ ವ್ಯಕ್ತಪಡಿಸುವ ಮೂಲಕ ದೇಸಿ ಉತ್ಪನ್ನಗಳ ಬಳಕೆಗೆ ಕರೆ ನೀಡಿದ್ದರು. ಅಲ್ಲದೆ ದೇಸಿ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವುದರ ಮೂಲಕ, ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವ ಮತ್ತು ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡಿದರು ಎಂದರು.

ಸತ್ಯ, ಶಾಂತಿ, ಅಹಿಂಸಾ ತತ್ವಗಳ ಮೂಲಕ ಹೋರಾಡಿದ ಗಾಂಧೀಜಿ ದೇಶದಾದ್ಯಂತ ಸತ್ಯಾಗ್ರಹದ ಮಾರ್ಗದಲ್ಲಿ ಬ್ರಿಟಿಷರನ್ನು ಎದುರಿಸಿದರು. ಶಿಕ್ಷಣ ತಜ್ಞ, ತತ್ವಜ್ಞಾನಿಗಳೂ ಆದ ಗಾಂಧೀಜಿ ವಿಶ್ವ ಕಂಡ ಮಹಾನ್ ಚೇತನ ಎಂದು ಸ್ಮರಿಸಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ ಅವರು ತಮ್ಮ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ನಾಯಕ. ಅಹಿಂಸಾ ತತ್ವದ ಆಧಾರದ ಮೇಲೆ ದೇಶಕ್ಕೆ ಸ್ವಾತಂತ್ರ್ಯ ಬರಲು ಹೋರಾಡಿದ ಗಾಂಧೀಜಿ ಆದರ್ಶಗಳನ್ನು ಅಳವಡಿಸಿಕೊಂಡು ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.

ದೇಶದ ಪ್ರಗತಿಗೆ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆ ಅಪಾರ. ಭಾರತ ಹೈನುಗಾರಿಕೆಯಲ್ಲಿ ಅಭಿವೃದ್ಧಿ ಹೊಂದಲು ಶಾಸ್ತ್ರಿ ಅವರು ದಿಟ್ಟಕ್ರಮವೇ ಕಾರಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರ್ಚಕ ಬಾಲಕೃಷ್ಣಭಟ್, ಪಾದ್ರಿ ಜರೋಮ್ ಮಚಾಡೋ, ಮೌಲಾನಾ ಮುನಾವರ್ ಪಾಷ ಅವರನ್ನು ಸನ್ಮಾನಿಸಲಾಯಿತು. ಪುರಸಭಾ ಅಧ್ಯಕ್ಷ ಸಿ.ಎನ್.ಮೋಹನ್, ಉಪಾಧ್ಯಕ್ಷೆ ಕವಿತಾ ರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎ.ಗಣೇಶ್, ಸದಸ್ಯರಾದ ರೇಖಾ ಅನಿಲ್, ಲಕ್ಷ್ಮಮ್ಮ, ರಾಣಿಕೃಷ್ಣ, ಧರಣೇಶ್, ಮುಖ್ಯಾಧಿಕಾರಿ ಆರ್.ಯತೀಶ್‌ಕುಮಾರ್, ನಾಮ ನಿರ್ದೇಶಿತ ಸದಸ್ಯರಾದ ರವಿ, ಉಮಾಶಂಕರ್, ಟಿಪಿಸಿಎಂಎಸ್ ಅಧ್ಯಕ್ಷ ಅನಿಲ್ ಮರಗೂರು, ತಾಲೂಕು ಕನ್ನಡ ಸಾಹಿತ್ಯಪರಿಷತ್ ಅಧ್ಯಕ್ಷ ಎಚ್.ಎನ್.ಲೋಕೇಶ್, ಕೆಡಿಪಿ ಸದಸ್ಯ ಮಹೇಶ್ ಕಬ್ಬಾಳು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್‌ಗೌಡ , ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಶಿರಸ್ತೇದಾರ್ ಅನಿಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net