

ಮಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ 2ನೇ ಹಂತದ ಮತದಾನ ಭಾನುವಾರ ನಡೆದಿದೆ. ಮತದಾನಕ್ಕೂ ಮುನ್ನವೇ ಅಭ್ಯರ್ಥಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಏಕೆ ಗೊತ್ತಾ?
ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸರು ಕಲ್ಮಡ್ಕ ಗ್ರಾಮದ ಹುಕ್ರಪ್ಪ ಯಾನೆ ನಾರಾಯಣ(38) ಎಂಬಾತನ್ನು ಬಂಧಿಸಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಈತನ ವಿರುದ್ಧ ಕೇಸ್ ದಾಖಲಾಗಿದೆ.
ಸೋದರ ಸಂಬಂಧಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹುಕ್ರಪ್ಪ ಯಾನೆ ನಾರಾಯಣನ ವಿರುದ್ಧ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರಾತ್ರಿಯೇ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು.
ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮೂರು ದಿನ ಹೆಚ್ಚಿನ ವಿಚಾರಣೆ ನಡೆಸಲು ಕಸ್ಟಡಿಗೆ ಪಡೆದಿದ್ದಾರೆ. ಈತ ಕಲ್ಮಡ್ಕ ಗ್ರಾಮದ 1ನೇ ವಾರ್ಡ್ನಿಂದ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ. ಆರೋಪಿ ಅವಿವಾಹಿತನಾಗಿದ್ದ.