ಗದಗ: ಗ್ರಾಪಂ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ! ವೇಳಾ ಪಟ್ಟಿ ಪ್ರಕಟ

05GDG05
Published on

ಗದಗ: ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗದಗ ಜಿಲ್ಲೆಯ ಲಕ್ಕುಂಡಿ-2, ಕೊಂಚಿಗೇರಿ, ರಣತೂರ, ವಡವಿ, ಇಟಗಿ, ಡಂಬಳ, ಕದಾಂಪೂರ, ಕೊತಬಾಳ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಅಭ್ಯಥಿರ್ಗಳು ನ. 12ರ ಒಳಗಾಗಿ ನಾಮಪತ್ರಗಳನ್ನು ಸಲ್ಲಿಸಬಹುದು. ನ. 13 ರಂದು ನಾಮಪತ್ರ ಪರಿಶೀಲಿಸಲಾಗುವುದು. ನ. 15ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ, ನ. 23 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಸಲಾಗುವುದು. ನ. 26 ರಂದು ಮತ ಎಣಿಕೆ ನಡೆಸಲಾಗುವುದು. ಚುನಾವಣೆ ನಡೆಯುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ನ. 6 ರಿಂದ ಜಾರಿಯಲ್ಲಿ ಬರಲಿದೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಪ್ರಕಟಣೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net