ಜಿಲ್ಲೆಯ ವಿವಿಧ ಗ್ರಾಪಂಗೆ ಉಪಚುನಾವಣೆ ಘೋಷಿಸಿದ ಜಿಲ್ಲಾಧಿಕಾರಿ

09_02_Mdy_01(Dc Dr.H.N.Gopal Krishna)
Published on

ಮಂಡ್ಯ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅಧಿಸೂಚನೆ ಹೊರಡಿಸಿದ್ದಾರೆ.

ಮಂಡ್ಯ ತಾಲೂಕಿನ ಆಲಕೆರೆ ಗ್ರಾಪಂನ ಡಣಾಯಕನಪುರ ಕ್ಷೇತ್ರ ಮತ್ತು ಹುಲಿವಾನ ಗ್ರಾಪಂನ ಹುಲಿವಾನ ಕ್ಷೇತ್ರ ಹಾಗೂ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಪಂನ ಕುರಹಟ್ಟಿ ಕ್ಷೇತ್ರದ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು. ಆಕಾಂಕ್ಷಿತರು ಫೆ.14ರೊಳಗೆ ನಾಮಪತ್ರ ಸಲ್ಲಿಸಬಹುದು. 15ರಂದು ಪರಿಶೀಲನೆ, ಉಮೇದುವಾರಿಕೆ ವಾಪಸ್ ಪಡೆಯಲು 17ರಂದು ಕೊನೆಯ ದಿನ ಹಾಗೂ ಅವಶ್ಯವಿದ್ದರೆ ಮತದಾನ 25ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ನಡೆಯಲಿದೆ. 28ರಂದು ಮತ ಎಣಿಕೆ ಆಯಾ ತಾಲೂಕು ಕೇಂದ್ರದಲ್ಲಿ ನಡೆಯಲಿದೆ.

ಚುನಾವಣಾ ಕೆಲಸಗಳಿಗೆ 3 ಚುನಾವಣಾಧಿಕಾರಿ ಹಾಗೂ 3 ಸಹಾಯಕ ಚುನಾವಣಾಧಿಕಾರಿ ನೇಮಕ ಮಾಡಲಾಗಿದೆ. ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ಫೆ.28ರವರೆಗೆ ಜಾರಿಯಲ್ಲಿರುತ್ತದೆ. ಅಂತೆಯೇ ಚುನಾವಣೆ ನಡೆಯದ ಅಥವಾ ಅವಿರೋಧ ಆಯ್ಕೆಯಾಗಿ ಚುನಾವಣಾಧಿಕಾರಿ ಫಲಿತಾಂಶ ಘೋಷಿಸಿದಲ್ಲಿ ನೀತಿ ಸಂಹಿತೆ ಸ್ಥಗಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net