ಬಿ. ಮಟಕರೆಯಲ್ಲಿ ಜಮಾಬಂದಿ, ಗ್ರಾಮ ಸಭೆ

23 SARAG 2
filter: 0; fileterIntensity: 0.000000; filterMask: 0; captureOrientation: 0; hdrForward: 6; shaking: 0.041194; highlight: 1; algolist: 0; multi-frame: 1; brp_mask: 8; brp_del_th: 0.0061,0.0000; brp_del_sen: 0.1500,0.0000; delta:null; module: photo;hw-remosaic: false;touch: (0.2766665, 0.1387082);sceneMode: 7864320;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 39;
Published on

ಸರಗೂರು : ಗ್ರಾಮಸ್ಥರ ಬೇಡಿಕೆ ಈಡೇರಿಸಲು ಕ್ರಮ ವಹಿಸಲಾಗುವುದು ಎಂದು ಗ್ರಾಪಂ ಅಧ್ಯಕ್ಷ ನಾಗೇಂದ್ರ ತಿಳಿಸಿದರು. ತಾಲೂಕಿನ ಬಿ. ಮಟಕರೆ ಗ್ರಾಪಂ ಆವರಣದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸಭೆ ಹಾಗೂ ಜಮಾಬಂದಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮದ ರೈತರು, ಕೃಷಿಕರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಅವರ ಅಶೋತ್ತರಗಳಿಗೆ ಸ್ಪಂದಿಸಿ, ಸಮಸ್ಯೆಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವುದು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ತಿಳಿಸಿದರು. ಮನೆ ಮಂಜೂರು ಮಾಡುವ ನಿಟ್ಟಿನಲ್ಲಿ ವಿವಿಧ ಸಮುದಾಯದ ನಿರ್ಗತಿಕರಿಗೆ ಆದ್ಯತೆ ನೀಡಲಾಗುವುದು.ಪಂಚಾಯಿತಿಯಲ್ಲಿ ಕೆಲಸ ವಿಳಂಬ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಸಾರ್ವಜನಿಕರು ಕಂಗಾಲಾಗಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಹಂತಹಂತವಾಗಿ, ಕಾಲಮಿತಿಯೊಳಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಾಗೇಂದ್ರ ತಾಕೀತು ಮಾಡಿದರು. ವಿವಿಧ ಗ್ರಾಮಗಳಲ್ಲಿ 15ನೇ ಹಣಕಾಸಿನ ಅನುದಾನದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಖುದ್ದು ಕಾಮಗಾರಿ ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು.

ಸ್ಥಳದಲ್ಲೇ ಪರಿಹಾರ: ಪಂಚಾಯಿತಿ ವ್ಯಾಪ್ತಿಯ ಗ್ರಾಮದಿಂದ ಆಗಮಿಸಿದ್ದ ಮುಖಂಡರು ಕುಂದು, ಕೊರತೆಗಳ ಬಗ್ಗೆ ಹೇಳಿಕೊಂಡರು. ಪರಿಹಾರಕ್ಕಾಗಿ ಅರ್ಜಿ ನೀಡಿದರು. ಅನೇಕ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಯಿತು. ಪಿಡಿಒ ಭಾಗ್ಯಾ, ನೋಡೆಲ್ ಅಧಿಕಾರಿ ಸದಾಶಿವಯ್ಯ, ತೋಟಗಾರಿಕೆ ಇಲಾಖೆ ಅಧಿಕಾರಿ ಗೋವಿಂದರಾಜು, ಕೃಷಿ ಇಲಾಖೆಯ ಗಂಗಾಧರ, ವಿವಿಧ ಸಂಘಟನೆ ಮುಖಂಡರಾದ ಗೋವಿಂದರಾಜು, ನಾಗೇಂದ್ರ, ಸಿದ್ದು, ಸುರೇಶ ಇತರರು

ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net