17ರಂದು ದಾಸರಹಳ್ಳಿಯಲ್ಲಿ ಡಿಸಿ ಗ್ರಾಮವಾಸ್ತವ್ಯ

DC kavitha mannikereMMM
Published on

ಚಿತ್ರದುರ್ಗ:ಹೊಳಲ್ಕೆರೆ ತಾಲೂಕು ದಾಸರಹಳ್ಳಿಯಲ್ಲಿ ಸೆ.17ರಂದು ಡಿಸಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾಮಟ್ಟದ ಅಧಿಕಾರಿ ಗಳೊಂದಿಗೆ ಗ್ರಾಮ ವಾಸ್ತವ್ಯ ಹೂಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಚಿತ್ರದುರ್ಗ ತಾಲೂಕಿನ ಆಯಿತೋಳ್,ಚಳ್ಳಕೆರೆ ತಾ ಲೂಕಿನ ಪಿ.ಮಹಾದೇವಪುರ,ಹಿರಿಯೂರು ತಾಲೂಕಿನ ಬೆನಕನಹಳ್ಳಿ,ಹೊಸದುರ್ಗ ತಾಲೂಕಿನ ಶ್ರೀರಂಗಾಪುರ,ಮೊಳಕಾಲ್ಮೂರು ತಾಲೂ ಕಿನ ಗುಡ್ಡದಹಳ್ಳಿ ಗ್ರಾಮದಲ್ಲಿ ತಹಸೀಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ,ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಡಿಸಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net