ಅಗತ್ಯ ಕ್ರಮ ಕೈಗೊಳ್ಳಲು ನಿರ್ಣಯ

02Kush01
Published on

ಕುಶಾಲನಗರ: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ತುರ್ತು ಸಭೆ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.


ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಕಂಡಿಯ ಬಳಿ ಕಾವೇರಿ ನದಿ ನೀರಿನ ಪ್ರಮಾಣ ಪ್ರತಿ ವರ್ಷ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಇಲ್ಲಿರುವ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರನ್ನು ಇತ್ತೀಚೆಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು.


ಕಂದಾಯ ಸಚಿವರು ಜಿಲ್ಲಾಡಳಿತಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಸಭೆ ನಡೆಯಿತು. ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಭವಿಸಿದ ಮಳೆ ಹಾನಿ ಕುರಿತು ಪರಿಶೀಲಿಸಿ, ಕಂದಾಯ ಇಲಾಖೆಗೆ ಈಗಾಗಲೇ ಸಲ್ಲಿಸಲಾದ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಯಿತು.


ಉಪಾಧ್ಯಕ್ಷ ಮಾದಪ್ಪ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net