

ಕುಶಾಲನಗರ:
ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ಲೂರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆಯ ಗ್ರಾಮ ಪಂಚಾಯತಿ ಅಧ್ಯಕ್ಷೆ ಲತಾಬಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
ಸಭೆಯಲ್ಲಿ ಮಕ್ಕಳು ತಮ್ಮ ಶಾಲೆಗೆ ಸುಸಜ್ಜಿತ ಶೌಚಾಲಯ ಮತ್ತು ಮುಖ್ಯ ರಸ್ತೆಯಿಂದ ಶಾಲೆಯವರೆಗಿನ ಉಪ ರಸ್ತೆಯ ದುರಸ್ತಿ ಸೇರಿದಂತೆ ಶಾಲೆಯ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಸಭೆಯಲ್ಲಿ ಮಕ್ಕಳು ಚರ್ಚೆ ಮಾಡಿದರು.
ಸಭೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹೇಮಲತಾ ಮಕ್ಕಳ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ಒದಗಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ್, ಕಾರ್ಯದರ್ಶಿ ಕೆ.ಸಿ. ರವಿ, ಸೇರಿದಂತೆ ಸಿಬ್ಬಂದಿ ವರ್ಗ, ಶಾಲಾ ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.