

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಡಿಸೆಂಬರ್ 30ರಂದು ಪ್ರಕಟವಾಗಲಿದೆ. ಈ ಬಗ್ಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬಹುತೇಕ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ದಾಖಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ ಶೇಕಡ 85ರಿಂದ 90 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಹೆಚ್ಚೇನೂ ಆಸಕ್ತಿ ತೋರಿರಲಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನಮ್ಮ ಶಾಸಕರು, ಸಚಿವರು ಮತ್ತು ಕಾರ್ಯಕರ್ತರು ತಮ್ಮ ತಮ್ಮ ಕಾರ್ಯಕ್ಷೇತ್ರದಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳಾಗಬೇಕು. ಗ್ರಾಮಗಳ ಸಬಲೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಯೋಜನೆಯನ್ನು ಪ್ರಾಮಾಣಿಕವಾಗಿ ಪೂರೈಸುವುದಕ್ಕೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಹೇಳಿದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..