ಸದಸ್ಯರಿಗೆ ಗ್ರಾಮೀಣ ಕೀಡಾಕೂಟ

ಸದಸ್ಯರಿಗೆ ಗ್ರಾಮೀಣ ಕೀಡಾಕೂಟ
Published on

ಕುಶಾಲನಗರ: ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಶತಮಾನ ಕಂಡ ಕುಶಾಲನಗರ ಕೃಷಿ ಪತ್ತಿನ ಸಹಕಾರ ಸಂಘ ಕೇವಲ ಬ್ಯಾಂಕ್ ವ್ಯವಹಾರಕ್ಕೆ ಸೀಮಿತವಾಗದೆ ಇತರ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಸದಸ್ಯರಿಗೆ ಪ್ರಥಮ ಬಾರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಹೇಳಿದರು.

ನಂ.122 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶುಕ್ರವಾರ ಸದಸ್ಯರಿಗೆ ಆಯೋಜಿಸಿದ್ದ ಪ್ರಥಮ ವರ್ಷದ ಗ್ರಾಮೀಣ ಕ್ರೀಡಾಕೂಟ ಹಾಗೂ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಸಂಘದ ಶತಮಾನೋತ್ಸವ ಸಂದರ್ಭದಲ್ಲಿ ಸದಸ್ಯರ ಕೋರಿಕೆ ಮೇರೆಗೆ ಕ್ರೀಡೋತ್ಸವ ಆಯೋಜಿಸಲಾಗಿದೆ ಎಂದರು.

ಸಂಘದ ಲಾಭಾಂಶದಲ್ಲಿ ಪ್ರತ್ಯೇಕ ನಿಧಿಯನ್ನು ಸ್ಥಾಪನೆ ಮಾಡಿದ್ದು, ಇದರಿಂದ ವಿವಿಧ ಚಟುವಟಿಕೆ ನಡೆಸಲಾಗುತ್ತಿದೆ. ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹ ಬಹುಮಾನ ನೀಡಲಾಗುತ್ತಿದೆ ಎಂದರು.

ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಬಹುತೇಕ ಕ್ರೀಡೆಗಳು ಇಂದು ನಶಿಸಿ ಹೋಗುತ್ತಿವೆ. ಹಿಂದೆ ಕ್ರೀಡೆ, ಕಲೆ, ಸಂಸಕ್ಕತಿಗಳು ಗ್ರಾಮೀಣ ಜನರ ಬದುಕಿನ ಭಾಗವಾಗಿದ್ದವು. ಹಿಂದಿನ ಕಾಲದ ಕ್ರೀಡೆಗಳೇ ಇಂದು ವೈಜ್ಞಾನಿಕ ರೂಪ ಪಡೆದಿವೆ ಎಂದರು.

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಕ್ರೀಡಾಕೂಟದ ಜರ್ಸಿ ಬಿಡುಗಡೆ ಮಾಡಿ ಮಾತನಾಡಿದರು.

ಸಹಕಾರ ಸಂಘದ ಹಿರಿಯ ಸದಸ್ಯ ವಿ.ಎನ್.ಶಶಿಧರ್, ಉಪಾಧ್ಯಕ್ಷ ವಿ.ಎಸ್.ಆನಂದ್ ಕುಮಾರ್, ನಿರ್ದೇಶಕ ಪಿ.ಬಿ.ಯತೀಶ್, ಮಧುಸೂದನ್, ಮಧುಕುಮಾರ್, ನೇತ್ರಾವತಿ, ಕವಿತಾ, ಡಿ.ವಿ.ರಾಜೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಆರ್.ರಾಣಿ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಸ್.ರಾಜಶೇಖರ್, ಸಂಘದ ಕಾರ್ಯನಿರ್ವಣಾಧಿಕಾರಿ ಲೋಕೇಶ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net