ಪಟ್ಟೂರು ಶಾಲೆಯಲ್ಲಿ ವ್ಯಾಕರಣ ಕಾರ್ಯಾಗಾರ

Kkd_Kannada
Published on

ಕೊಕ್ಕಡ: ಕನ್ನಡ ಭಾಷಾ ಬೆಳವಣಿಗೆಯಲ್ಲಿ ವ್ಯಾಕರಣ ಪ್ರಮುಖವಾಗಿದ್ದು, ಮಕ್ಕಳಿಗೆ ವ್ಯಾಕರಣದ ಪರಿಚಯವಿದ್ದಾಗ ಭಾಷೆಯನ್ನು ಸುಲಭವಾಗಿ ಕಲಿಯಲು ಸಾಧ್ಯ. ಎಂದು ಪಟ್ಟೂರು ಶ್ರೀರಾಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ ಶೇಟ್ ಹೇಳಿದರು.

ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಕನ್ನಡ ವ್ಯಾಕರಣದಲ್ಲಿ ಸಮಾಸಗಳು ಎಂಬ ವಿಷಯದ ಕುರಿತ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.

ಕನ್ನಡ ವಿಭಾಗದ ಸಹ ಶಿಕ್ಷಕಿ ಸುಪ್ರೀತಾ ಎ. ಕಾರ್ಯಾಗಾರ ನಡೆಸಿಕೊಟ್ಟರು. ಕನ್ನಡ ವಿಭಾಗದ ಶಿಕ್ಷಕಿ ಸ್ವಾತಿ ಕೆ.ವಿ. ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net