

ವಿಜಯಪುರ : ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ನಗರದಲ್ಲಿ ಏ. 30 ರಂದು ಸಮಾಜ ಸೇವಕ ನಂದು ಗಡಗಿ ನೇತೃತ್ವದಲ್ಲಿ ಬೃಹತ್ ಶೋಭಾ ಯಾತ್ರೆ ಹಾಗೂ ಡಿಜೆ ಮೆರವಣಿಗೆ ನಡೆಯಲಿದೆ. ಅಂದು ಸಂಜೆ 4ಕ್ಕೆ ಇಲ್ಲಿನ ರಾಮಮಂದಿರದಿಂದ ಬೃಹತ್ ಶೋಭಾಯಾತ್ರೆಗೆ ಚಾಲನೆ ದೊರೆಯಲಿದ್ದು, ಶೋಭಾಯಾತ್ರೆಯು ಸಿದ್ಧೇಶ್ವರ ದೇವಸ್ಥಾನ, ಬಸವೇಶ್ವರ ವೃತ್ತ, ಗಾಂಧಿ ವೃತ್ತಗಳ ಮೂಲಕ ಸಂಚರಿಸಿ ಶಿವಾಜಿ ವೃತ್ತದಲ್ಲಿ ಸಮಾವೇಶಗೊಳ್ಳಲಿದೆ.
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಭಾಗವಹಿಸುವರು. ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಹಾಗೂ ಆಂದೋಲ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಸಿನಿ ತಾರೆಗಳಾದ ಕೆಜಿಎಫ್ ಗಣೇಶ, ನಟ ವಶಿಷ್ಠ ಸಿಂಹ, ಬಿಗ್ಬಾಸ್ ಖ್ಯಾತಿಯ ತನಿಷಾ ಕುಪ್ಪಂದ, ಹಾಸ್ಯ ನಟ ಗಿಲ್ಲಿ ಸೇರಿದಂತೆ ಮತ್ತಿತರರು ಉಪಸ್ಥಿತಿ ವಹಿಸಲಿದ್ದಾರೆ ಎಂದು ಪ್ರಕಟಣೆಯು ತಿಳಿಸಿದೆ.