ಕನ್ನಡಾಂಬೆಯ ಭವ್ಯ ಮೆರವಣಿಗೆ

2 Dwd 7 New
Published on

ಧಾರವಾಡ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯಿಂದ ನಗರದಲ್ಲಿ ಗುರುವಾರ ಕನ್ನಡಾಂಬೆಯ ಅದ್ಧೂರಿ ಮೆರವಣಿಗೆ ನಡೆಯಿತು.
ಇಲ್ಲಿನ ಛತ್ರಪತಿ ಶಿವಾಜಿ ವೃತ್ತದ ಬಳಿ ಮೇಯರ್ ವೀಣಾ ಬರದ್ವಾಡ ಮೆರವಣಿಗೆ ಚಾಲನೆ ನೀಡಿದರು. ಅಲ್ಲಿಂದ ಹೊರಟ ಮೆರವಣಿಗೆಯು ವಿವಿಧ ಬೀದಿಗಳಲ್ಲಿ ಸಂಚರಿಸಿ ಕಲಾಭವನ ತಲುಪಿತು. ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು.
ಕಲಾಭವನದಲ್ಲಿ ಜರುಗಿದ ಭವ್ಯ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಮಹಾಪೌರರು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಚಾಲನೆ ನೀಡಿದರು. ಮÁಜಿ ಮೇಯರ್ ಈರೇಶ ಅಂಚಟಗೇರಿ, ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸಭಾನಾಯಕ ಶಿವು ಹಿರೇಮಠ, ರಾಜಣ್ಣ ಕೊರವಿ, ಬೀರಪ್ಪ ಖಂಡೆಕಾರ, ವಿಜಯÁನಂದ ಶೆಟ್ಟಿ, ಸುರೇಶ ಬೆದರೆ, ಜ್ಯೋತಿ ಪಾಟೀಲ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net