ಕಲಬುರಗಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ : ಭರ್ಜರಿ ಸ್ಚಾಗತ

IMG-20250416-WA0017
Published on

ಮೈಸೂರು ಬೆಳಹಾವಿಯಲ್ಲೂ ಉದ್ಯೋಗ‌ ಮೇಳ

ಕಲಬುರಗಿ : ಉದ್ಯೋಗ ಮೇಳ ಉದ್ಘಾಟನೆ, ಸೂಪರ್ ಸ್ಪೇಷಾಲಿಟಿ ಆಸ್ತ್ರತ್ರೆ ಲೋಕಾರ್ಪಣೆ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಈಗ ಸಿಎಂ ಸಿದ್ಧರಾಮಯ್ಯ ಅವರು ಕಲಬುರಗಿಗೆಆಗಮಿಸಿದರು. ಅವರಿಗೆ ವಿಮಾನ ನಿಲ್ದಾಣದಲ್ಕಿ ಭರ್ಜರಿ ಸ್ಚಾಗತ ಕೋರಲಾಯಿತು.

ಗೌರವ ವಂದನ ಸ್ವೀಕರಿಸಿದರು. ಬಳಿಕ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತೆರಳಿದರು. ಈ ವೇಳೆ ಪತ್ರಕರ್ತರ ಜತೆ ಮಾತನಾಡಿ‌ ಮುಂದಿನ ದಿನಗಳಲ್ಲಿ ಮೈಸೂರು , ಬೆಳಗಾವಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ತಿಳಿಸಿದರು.

ಡಿಸಿಎಂ ಶಿವಕುಮಾರ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅದ್ಯಕ್ಷ ಡಾ.ಅಜಯಸಿಂಗ್ ಧರ್ಮಸಿಂಗ್, ಸಂಸದ ರಾಧಾಕೃಷ್ಣ ದೊಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂ.ವೈ.ಪಾಟೀಲ್, ಬಿ.ಅರ್.ಪಾಟೀಲ್ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net