ಸುಳ್ಯದಲ್ಲಿ ಕನ್ನಡ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ

ratha
Published on


ಸುಳ್ಯ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪಂಜ ಮತ್ತು ಸುಳ್ಯ ಹೋಬಳಿ ಘಟಕ ಹಾಗೂ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಸುಳ್ಯಕ್ಕೆ ಸೋಮವಾರ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ ನೀಡಲಾಯಿತು.

ತಹಸೀಲ್ದಾರ್ ಅರವಿಂದ್ ಕೆ.ಎಂ., ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ನ.ಪಂ. ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ಬಿ ಇ ಒ ಶೀತಲ್ ಯು.ಕೆ., ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲ್, ಪ್ರಕಾಶ್ ಮೂಡಿತ್ತಾಯ ಹಾಗೂ ಸಾಹಿತಿಗಳು ಸೇರಿದಂತೆ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net