ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ

14 HBD 1
ಚಿಟಗುಪ್ಪ ತಾಲೂಕಿನ ಮನ್ನಾಎಖೇಳ್ಳಿ ಕ್ರಾಸ್ ಬಳಿ ಕನ್ನಡ ಜ್ಯೋತಿ ರಥಯಾತ್ರೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಬರಮಾಡಿಕೊಂಡು ಮಾತನಾಡಿದರು. ಮಂಜುನಾಥ ಪಂಚಾಳ, ಸುರೇಶ ಚನ್ನಶೇಟ್ಟಿ, ನಿಂಗರಾಜ ಅರಸ್ ಇತರರಿದ್ದರು.
Published on

ಚಿಟಗುಪ್ಪ: ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿಮಿತ್ತ ರಾಜ್ಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ನಡೆಸಲಾಗುತ್ತಿದ್ದು, ಕನ್ನಡ ಜಾತ್ರೆಗೆ ನಮ್ಮ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕರೆ ನೀಡಿದರು.

ಮನ್ನಾಎಖೇಳ್ಳಿ ಕ್ರಾಸ್‌ನಲ್ಲಿ ಭಾನುವಾರ ತಾಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮತ್ತು ತಾಲೂಕು ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ ಕೋರಿ ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬರಮಾಡಿಕೊಂಡು ಅವರು ಮಾತನಾಡಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ನಾನಾ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿ ಗಮನ ಸೆಳೆದವು. ಮನ್ನಾಎಖ್ಖೇಳ್ಳಿ ಗ್ರಾಪಂ ಅಧ್ಯಕ್ಷ ರಾಜಕುಮಾರ, ತಹಸೀಲ್ದಾರ್ ಮಂಜುನಾಥ ಪಂಚಾಳ, ಬೀದರ್ ತಾಲೂಕು ಗ್ರೇಡ್-2 ತಹಸೀಲ್ದಾರ್ ಜಿಯಾವುದ್ದೀನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಸಿದ್ರಾಮ ಸಿಂಧೆ, ಸಮಾಜ ಕಲ್ಯಾಣ ಅಧಿಕಾರಿ ನಿಂಗರಾಜ ಅರಸ್, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ, ತಾಲೂಕು ಅಧ್ಯಕ್ಷ ರಮೇಶ ಸಲಗರ, ತಾಪಂ ಇಒ ಲಕ್ಷ್ಮೀ ಬಿರಾದಾರ, ಬಿಇಒ ವೆಂಕಟೇಶ ಗೂಡಾಳ, ಡಾ.ಗೋವಿಂದ, ಸಿಪಿಐ ಶ್ರೀನಿವಾಸ ಅಲ್ಲಾಪುರೆ, ಪಿಎಸ್‌ಐ ಮಹೇಂದ್ರಕುಮಾರ, ಆರ್‌ಐ ಮಹೇಶ ಅನಂತವಾಡಕರ, ಪಿಡಿಒ ಭಾಗ್ಯಜ್ಯೋತಿ, ಪ್ರಮುಖರಾದ ಶಿವರಾಜ ನೀಲಾ, ಡಾ.ಬಸವರಾಜ ಹೂಗಾರ, ಅನಿಲ ಸಿಂಧೆ, ಮಸ್ತಾನ್ ನೂರೋದ್ದಿನ್, ರೇವಣಸಿದ್ದಪ್ಪ ಡೂಂಗರಗಾಂವ, ವೀರಶೆಟ್ಟಿ ಮಡಿವಾಳ, ದತ್ತು, ಆನಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net