

ಬಾದಾಮಿ: ಮುಂಬರುವ ಡಿ.21, 22, 23 ರಂದು ಮಂಡ್ಯದಲ್ಲಿ ನಡೆಯಲಿರುವ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಸೋಮವಾರ ನಗರದ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ನಾಡದೇವತೆಗೆ ಹೂವಿನ ಹಾರ ಹಾಕಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ತಾಲೂಕು ಆಡಳಿತದಿಂದ ತಹಸೀಲ್ದಾರ ಮಧುರಾಜ್ ಮತ್ತು ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಪೂಜೆ ಸಲ್ಲಿಸಿದರು.
ಪುರಸಭೆ ಸದಸ್ಯರಾದ ಶಂಕರ ಕನಕಗಿರಿ, ಮಂಜುನಾಥ ಹೊಸಮನಿ, ರಾಮವ್ವ ಮಾದರ, ಮಹಾಂತೇಶ ತಳವಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವುಕುಮಾರ ಹಿರೇಮಠ, ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ಗೌರವ ಕಾರ್ಯದರ್ಶಿ ಡಾ. ಚಂದ್ರಶೇಖರ ಕಾಳನ್ನವರ, ತಾಲೂಕು ಕಸಾಪ ಅಧ್ಯಕ್ಷ ಬಿ.ಎ್. ಹೊರಕೇರಿ, ತಾ.ಪಂ. ಇಒ ಮಲ್ಲಿಕಾರ್ಜುನ ಬಡಿಗೇರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ, ಮುಖ್ಯಾಧಿಕಾರಿ ಬಂದೇನವಾಜ ಡಾಂಗೆ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ. ಪಾಟೀಲ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಎ. ಹದ್ಲಿ, ಶಿಕ್ಷಣ ಸಂಯೋಜಕ ಬಿ.ಟಿ. ಹಳ್ಳಿ, ವೈ.ಬಿ. ಚಲವಾದಿ, ಎಸ್.ಪಿ. ಗೌಡರ, ಎಂ.ಸಿ. ನಾಲತವಾಡ, ಬಿ.ಕೆ. ಚಿಮಲ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಎ್. ಕುಂಬಾರ, ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಕೆ. ಬಡಿಗೇರ, ವಿವಿಧ ಇಲಾಖೆ ಅಧಿಕಾರಿಗಳು, ಸ್ಥಳೀಯ ಶಾಲೆ ಮುಖ್ಯಶಿಕ್ಷಕರು, ಶಾಲಾ ಮಕ್ಕಳು ಹಾಜರಿದ್ದರು.