ಸಂಸದ ಶ್ರೇಯಸ್ ಎಂ.ಪಟೇಲ್‌ಗೆ ಅದ್ದೂರಿ ಸ್ವಾಗತ

ಫೋಟೋ ಶೀರ್ಷಿಕೆ 05 ಸಿಆರ್_ಪಿ-2ಎ
Published on

ಚನ್ನರಾಯಪಟ್ಟಣ: ಹಾಸನ ಲೋಕಸಭಾ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ ಶ್ರೇಯಸ್ ಎಂ.ಪಟೇಲ್ ಅವರನ್ನು ಬುಧವಾರ ಸಾವಿರಾರು ಕಾರ್ಯಕರ್ತರು ಪಟ್ಟಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು.


ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬೆಳಗ್ಗೆ ಆಗಮಿಸಿದ ಸಂಸದರನ್ನು ಕಾರ್ಯಕರ್ತರು, ಅಭಿಮಾನಿಗಳು ಹಾರಿ ಹಾಕಿ ಸ್ವಾಗತಿಸಿದರು. ಶುಭ ಕೋರಲು ಕಾರ್ಯಕರ್ತರು ಮುಗಿಬಿದ್ದರು. ನಂತರ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿದರು.


ಬಳಿಕ ಮಾತನಾಡಿದ ಶ್ರೇಯಸ್ ಪಟೇಲ್, ಅತಿಹೆಚ್ಚು ಮತ ನೀಡಿರುವ ಇಲ್ಲಿನ ಜನರಿಗೆ ಅಭಿನಂದನೆ. ಈ ಹಿಂದಿನ ಯಾವ ಚುನಾವಣೆಯಲ್ಲಿಯೂ ಇಷ್ಟೊಂದು ಮತ ಬಂದಿರಲಿಲ್ಲ. ಇದಕ್ಕೆ ಋಣಿಯಾಗಿರುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಮುಂಬರುವ ಸ್ಥಳೀಯ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಮಹತ್ತರ ಜವಾಬ್ದಾರಿ ಇದೆ ಎಂದರು.


ಗೆಲುವಿನ ಸಂಭ್ರಮದಲ್ಲಿ ಮೈಮರೆಯುವುದು ಬೇಡ. ಇಂದಿನಿಂದಲೇ ಪಕ್ಷವನ್ನು ಸಂಘಟಿಸಬೇಕು. ಪ್ರೀತಿ, ವಿಶ್ವಾಸ, ಗೌರವದಿಂದ ಮತ ನೀಡಿದ್ದಾರೆ. ಅದನ್ನು 5 ವರ್ಷಗಳ ಕಾಲ ಉಳಿಸಿಕೊಳ್ಳುವುದು ನನ್ನ ಕರ್ತವ್ಯ ಎಂದು ಹೇಳಿದರು.


ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ವಿಧಾನ ಪರಿಷತ್ತು ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಮಂಜೇಗೌಡ, ಮುಖಂಡರಾದ ಶಿವರಾಜ್, ಜಿ.ಆರ್.ಮೂರ್ತಿ, ಎನ್.ಡಿ.ಕಿಶೋರ್, ಯುವರಾಜ್, ಮೋಹನ್, ಜಗದೀಶ್, ಯುವ ಘಟಕದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net