ಅಜ್ಜಿ ತಾತಂದಿರ ದಿನದ ಸಂಭ್ರಮ

ಅಜ್ಜಿ ತಾತಂದಿರ ದಿನದ ಸಂಭ್ರಮ
Published on

ಹಾಸನ: ನಗರದ ಹೊರವಲಯದಲ್ಲಿರುವ ವಿದ್ಯಾಸೌಧ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಅಜ್ಜಿ-ತಾತಂದಿರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಪವನ್ ಮಂಜೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಅಜ್ಜಿ ತಾತಂದಿರ ಪ್ರೀತಿ, ಅಕ್ಕರೆಯ ಬಗ್ಗೆ ತಿಳಿಸಿದರು. ಪ್ರಾಂಶುಪಾಲರಾದ ಮಮತಾ ನಟೇಶ್ ಮಾತನಾಡಿದರು. ಅಜ್ಜಿ ತಾತಂದಿರಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕೆಐಎಡಿಬಿ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ಶಾಲಿನಿ, ವಿಜಯನಗರ ಶಾಖೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪೂರ್ಣಿಮಾ, ಕೆ.ಆರ್ ಪುರಂ ಶಾಲೆಯ ಶಿಕ್ಷಕ ವೃಂದ, ಬೋಧಕ ಮತ್ತು ಬೋಧಕೇತರ ವರ್ಗ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net