

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಪುತ್ತಿಗೆ ಕಾರ್ಯಕ್ಷೇತ್ರದಲ್ಲಿ ಪುತ್ತಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದಡಿ ಕುಡಿಯುವ ಶುದ್ಧ ನೀರಿಗಾಗಿ ಫಿಲ್ಟರ್ ಅಳವಡಿಕೆಗೆ ನೀಡಲಾದ 20,000 ರೂ. ಅನುದಾನದ ಮಂಜೂರಾತಿ ಪತ್ರ ಹಸ್ತಾಂತರಿಸಲಾಯಿತು.
ಮಂಜೂರಾತಿ ಪತ್ರವನ್ನು ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಅವರಿಗೆ ಹಸ್ತಾಂತರಿಸಿದರು. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ., ಜ್ಞಾನ ವಿಕಾಸ ತಾಲೂಕು ಸಮನ್ವಯಾಧಿಕಾರಿ ಚೇತನ, ಸೇವಾ ಪ್ರತಿನಿಧಿ ಪ್ರಿಯಲತಾ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಗುರು ಮದುಸೂದನ್ ಕೆ.ಎ. ಸ್ವಾಗತಿಸಿದರು.