ಸೇತುವೆಗೆ ಅನುದಾನ ಶೀಘ್ರ ಮಂಜೂರು: ಸಚಿವ ಮಧು ಬಂಗಾರಪ್ಪ

9 smg 14
ಪುರದಾಳು ಗ್ರಾಮದ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿಯನ್ನು ಸಚಿವ ಮಧು ಬಂಗಾರಪ್ಪ ಪರಿಶೀಲಿಸಿದರು. ಕಲಗೋಡು ರತ್ನಾಕರ, ಜಿ.ಡಿ.ಮಂಜುನಾಥ್, ಆರ್.ಪ್ರಸನ್ನಕುಮಾರ್ ಇತರರಿದ್ದರು.
Published on

ಶಿವಮೊಗ್ಗ: ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆಯ ಹಂತದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ. ಅದಕ್ಕೆ ಬೇಕಾದ ಅನುದಾನವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸ್ಥಳದಲ್ಲೇ ಅಽಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ಪುರದಾಳು ಗ್ರಾಮಕ್ಕೆ ಭೇಟಿ ನೀಡಿ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿ ಮಾತನಾಡಿದರು. ಇದಕ್ಕೂ ಮೊದಲು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನ ಸೇವಾ ಸಮಿತಿಯಿಂದ ಸಚಿವರು ಹಾಗೂ ಶಾಸಕಿ ಶಾರದಾ ಪರ‍್ಯಾನಾಯ್ಕ್ ಅವರನ್ನು ಸನ್ಮಾನಿಸಲಾಯಿತು.
ದೇವಸ್ಥಾನ ಆಡಳಿತ ಮಂಡಳಿಯಿAದ ಕಲ್ಯಾಣ ಮಂಟಪ ಮಂಜೂರು ಮಾಡುವಂತೆ ಹಾಗೂ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಇದಕ್ಕೆ ಸಕಾರಾಕವಾಗಿ ಪ್ರತಿಕ್ರಿಯಿಸಿದ ಸಚಿವರು, ತಂದೆ ಬಂಗಾರಪ್ಪ ಅವರಿಗೆ ಪುರದಾಳು ಗ್ರಾಮದ ಬಗ್ಗೆ ವಿಶೇಷ ಅಭಿಮಾನವಿತ್ತು. ರಸ್ತೆ, ತುಂಗಾ ಏತ ನೀರಾವರಿ, ಗೋದಾಮು ನಿರ್ಮಾಣಕ್ಕೆ ಅನುದಾನ ನೀಡಿz್ದÁರೆ. ಕಲ್ಯಾಣ ಮಂಟಪ ನಿರ್ಮಾಣಕ್ಕೆ ಮಂಜೂರು ಮಾಡಿ ಅಗತ್ಯ ಅನುದಾನ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.
ಪುರದಾಳು ಗ್ರಾಪಂನಿAದ ಸಚಿವರನ್ನು ಸನ್ಮಾನಿಸಲಾಯಿತು. ಕಡ್ಲೆಒಡ್ಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪುರದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ನೀಡಿದರು. ಶಾಸಕಿ ಶಾರದಾ ಪರ‍್ಯಾನಾಯ್ಕï, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ್, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಗ್ರಾಪಂ ಅಧ್ಯಕ್ಷೆ ಮಾನಸಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net