

ಚಾಮರಾಜನಗರ : ಸರ್ಕಾರ 25 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದು, ತಾಲೂಕಿನ ಆಯ್ದ 63 ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಸೋಮವಾರ ತಾಲೂಕಿನ ರಾಘವಾಪುರ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. ಸದ್ಯ 25 ಕೋಟಿ ರೂ. ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಆಯ್ದ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ಮಹದೇವಪ್ಪ, ಉಪಾಧ್ಯಕ್ಷೆ ಸುಧಾರಾಣಿ, ಸದಸ್ಯ ಆರ್.ಡಿ.ಸಂತೋಷ್ ಸೇರಿದಂತೆ ಹಲವರು ಇದ್ದರು.