ಬೆಳ್ವೆ ದೇವಳಕ್ಕೆ ಅನುದಾನ ಮಂಜೂರು

belve
ಬೆಳ್ವೆ ಶ್ರೀ ಶಂಕರನಾರಾಯಣ ದೇವಸ್ಥಾನಕ್ಕೆ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಎರಡು ಲಕ್ಷ ರೂ.ಅನುದಾನ ಮಂಜೂರಾತಿ ಪತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ಬೆಳ್ವೆ ಶ್ರೀಶಂಕರನಾರಾಯಣ ದೇವಳದ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು
Published on

ಬೆಳ್ವೆ: ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಎರಡು ಲಕ್ಷ ರೂ.ಅನುದಾನ ಮಂಜೂರು ಮಾಡಿದ್ದಾರೆ.

ಮಂಜೂರಾತಿ ಪತ್ರವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ಬೆಳ್ವೆ ಶ್ರೀ ಶಂಕರನಾರಾಯಣ ದೇವಳ ಆಡಳಿತ ಮಂಡಳಿಯವರಿಗೆ ಇತ್ತೀಚೆಗೆ ಹಸ್ತಾಂತರಿಸಿದರು. ಆಡಳಿತ ಮೊಕ್ತೇಸರ ಶಂಕರ ಶೆಟ್ಟಿ ಬೆಳ್ವೆ, ಬೆಳ್ವೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ನಿವೃತ್ತ ಮುಖ್ಯ ಶಿಕ್ಷಕ ಸುರೇಶ ಶೆಟ್ಟಿ ಬೆಳ್ವೆ, ಅರ್ಚಕ ಸುಧಾಕರ್ ಭಟ್, ನಿವೃತ್ತ ಅಂಚೆ ಪಾಲಕ ಸುಬ್ಬಣ್ಣ ದೇವಾಡಿಗ, ರಾಮ ಪೂಜಾರಿ, ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ, ಬೆಳ್ವೆ ಒಕ್ಕೂಟ ಅಧ್ಯಕ್ಷೆ ಪೂಜಾ, ಅಲ್ಬಾಡಿ ಒಕ್ಕೂಟ ಅಧ್ಯಕ್ಷ ರವಿಚಂದ್ರ ನಾಯ್ಕ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ವೆ ಘಟಕ ಪ್ರತಿನಿಧಿ ಹೇಮಂತ್ ಪೂಜಾರಿ, ಸೇವಾಪ್ರತಿನಿಧಿ ಶ್ರೀಮತಿ ಶೆಟ್ಟಿ, ಪ್ರಶಾಂತ ಗುಮ್ಮೋಲ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net