ಗ್ರಾಪಂ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ

29ckd3-Web
ಗದಗ ನಗರದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಸಮಾವೇಶವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಲಾಯಿತು. ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ ಇದ್ದರು.
Published on

ಚಿಕ್ಕೋಡಿ: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಮೋಘ ಗೆಲುವು ಸಾಧಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಭಾನುವಾರ ಗದಗ ನಗರದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ರಾಮಮಟ್ಟದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಿ ಹಳ್ಳಿಯಿಂದ ದಿಲ್ಲಿಯ ತನಕ ಪಕ್ಷವನ್ನು ಅಧಿಕಾರಕ್ಕೆ ತರುವುದು ಸಮಾವೇಶದ ಉದ್ದೇಶವಾಗಿದೆ. ಜನಪರ ಪಕ್ಷವಾಗಿರುವ ನಮ್ಮ ಬಿಜೆಪಿಯ ಮೂಲಮಂತ್ರವೇ ಅಭಿವೃದ್ಧಿಯಾಗಿದೆ. ಹೀಗಾಗಿ ಉಳಿದೆಲ್ಲ ರಾಜಕೀಯ ಪಕ್ಷಗಳಿಗಿಂತ ನಮ್ಮ ಪಕ್ಷ ಭಿನ್ನವಾಗಿದ್ದು, ಜನರಿಗೆ ಪ್ರಾಮಾಣಿಕವಾಗಿ ಸರ್ಕಾರದ ಸೌಲಭ್ಯ ತಲುಪಿಸುವ ಏಕೈಕ ಪಕ್ಷವಾಗಿದೆ. ಸರ್ಕಾರದ ಜನಪರ ಯೋಜನೆಗಳು ಪ್ರಜೆಗಳ ಮನೆ ಬಾಗಿಲಿಗೆ ಮುಟ್ಟುತ್ತಿವೆ ಎಂದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ, ಕೃಷಿ ಸಚಿವರಾದ ಬಿ.ಸಿ ಪಾಟೀಲ, ಸಂಸದ ಶಿವಕುಮಾರ್ ಉದಾಸಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಮೋಹನ್ ಮಾಳಶೆಟ್ಟಿ, ರಾಜ್ಯ ಯುವಮೋರ್ಚಾ ಅಧ್ಯಕ್ಷ ಡಾ. ಸಂದೀಪಕುಮಾರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಗ್ರಾಮ ಸ್ವರಾಜ್ಯ ಸಮಾವೇಶದ ಸಂಯೋಜಕ ಸಿದ್ಧರಾಜು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಗಣ್ಯರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net