ಗ್ರಾಪಂ ಮಾಜಿ ಅಧ್ಯಕ್ಷ ಆತ್ಮಹತ್ಯೆ

Sucide
Published on

ಖಾನಾಪುರ: ತಾಲೂಕಿನ ಲೋಂಡಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಕಾಶ ಪಾಲೇಕರ್(55) ಸೋಮವಾರ ಸಂಜೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಅವರು, ಇತ್ತೀಚಿನ ದಿನಗಳಲ್ಲಿ ಹಣಕಾಸಿನ ಅಡಚಣೆಯಿಂದ ನೊಂದಿದ್ದರು. ಜಿಗುಪ್ಸೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಖಾನಾಪುರ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net