ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

2
ಹೆಬ್ಬಾಳ ಗ್ರಾಮಕ್ಕೆ ಸರಿಯಾಗಿ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಪಂ ಕಾರ್ಯಾಲಯಕ್ಕೆ ಬೀಗ ಹಾಕಿ, ಖಾಲಿ ಕೊಡ ಹಿಡಿದು ಪ್ರತಿಭಟಿಸಿದರು. ಮಹಾದೇವಿ ಮಠಪತಿ, ಗೌರಿ ಗಣಾಚಾರಿ, ಮಹಾದೇವಿ ಅಮ್ಮಣಗಿ ಇತರರಿದ್ದರು
Published on

ಉಳ್ಳಾಗಡ್ಡಿ-ಖಾನಾಪುರ: ಸಮೀಪದ ಹೆಬ್ಬಾಳ ಗ್ರಾಮದಲ್ಲಿ ಸುಮಾರು 20 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗಿಲ್ಲ ಎಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ಮಂಗಳವಾರ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಬೀಗ ಹಾಕಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.

ಮುಖಂಡ ರಾವಸಾಹೇಬ ಪಾಟೀಲ ಮಾತನಾಡಿ, ಸರಿಯಾಗಿ ನೀರು ಪೂರೈಸುತ್ತಿಲ್ಲ. 20 ದಿನಗಳ ಹಿಂದೆ ಗ್ರಾಮಕ್ಕೆ ಬೋರವೆಲ್ ನೀರು ಬಿಡಲಾಗಿತ್ತು. ಆದರೆ, ಅವು ಕುಡಿಯಲು ಯೋಗ್ಯವಿದ್ದಿಲ್ಲ. ಆ ನೀರು ಬಳಕೆಗೆ ಮಾತ್ರ ಉಪಯೋಗಿಸಲಾಗಿತ್ತು. ಗ್ರಾಮದಲ್ಲಿ ನೀರಿನ ಸಮಸ್ಯೆ ವಿಕೋಪಕ್ಕೆ ಹೋಗಿದೆ. ಒಟ್ಟಾರೆ ಗ್ರಾಮ ಪಂಚಾಯಿತಿಗೆ ದಿಕ್ಕಿಲ್ಲದಂತಾಗಿದೆ ಜನರ ಸಮಸ್ಯೆಗಳಿಗೆ ಯಾರು ಸ್ಪಂದಿಸುತ್ತಿಲ್ಲ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ಬರುವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದರು. ಮಹಾದೇವಿ ಮಠಪತಿ, ಗೌರಿ ಗಣಾಚಾರಿ, ಮಹಾದೇವಿ ಅಮ್ಮಣಗಿ, ಮಹಾದೇವಿ ಮಠಪತಿ, ಸವಿತಾ ಪಾಟೀಲ, ರಾವಸಾಹೇಬ ಪಾಟೀಲ, ರಾಜು ಮಠಪತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net