ಸ್ಮಶಾನ ಒತ್ತುವರಿ ಆರೋಪ

ನಂಜನಗೂಡು ಸಮೀಪದ ಚಾಮಲಾಪುರ ಹುಂಡಿ ಗ್ರಾಮಸ್ಥರು ಖಾಸಗಿ ವ್ಯಕ್ತಿಯೊಬ್ಬರು ಸ್ಮಶಾನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಶಿವರಾಜು, ಪಾಪ, ಶಿವಕುಮಾರ್, ಬಸವಣ್ಣ, ನಾಗಮಣಿ ಶಂಕರಪ್ಪ, ಚಂದ್ರು, ಹುಂಡಿ ಮಾದೇಶ್, ಜವರಯ್ಯ ಇತರರು ಇದ್ದರು.

Published on

ನಂಜನಗೂಡು: ಸ್ಮಶಾನಕ್ಕೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಶನಿವಾರ ಚಾಮಲಾಪುರ ಹುಂಡಿ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದರು.

ಕಪಿಲಾ ನದಿ ತೀರದಲ್ಲಿರುವ ನಗರದ ಚಾಮಲಾಪುರದ ಹುಂಡಿಗೆ ಸೇರಿದ ಸ್ಮಶಾನ ಜಾಗದಲ್ಲಿ ಮೈಸೂರು ಮೂಲದ ವ್ಯಕ್ತಿಯೊಬ್ಬರು ರೆಸಾರ್ಟ್ ಮಾಡುವ ಉದ್ದೇಶದಿಂದ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮದ ಮುಖಂಡರು, ಯುವಕರು ಸ್ಥಳಕ್ಕೆ ತೆರಳಿ ಸ್ಮಶಾನ ಜಾಗದಲ್ಲಿ ರೆಸಾರ್ಟ್ ನಿರ್ಮಾಣ ಮಾಡದಂತೆ ತಡೆದು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್, ಕಂದಾಯ ಇಲಾಖೆ, ನೀರಾವರಿ ಇಲಾಖೆ ಅಧಿಕಾರಿಗಳು ಆಗಮಿಸಿ ಈ ಸಂಬಂಧ ಸರ್ವೆ ಮಾಡಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ಗ್ರಾಮದ ಯಜಮಾನರಾದ ಶಿವರಾಜು, ಪಾಪ, ಶಿವಕುಮಾರ್, ಬಸವಣ್ಣ, ಮುಖಂಡರಾದ ನಾಗಮಣಿ ಶಂಕರಪ್ಪ, ಚಂದ್ರು, ಹುಂಡಿ ಮಾದೇಶ್, ಜವರಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net