ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು

byn (1)
Published on

ಬೈಂದೂರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ನವೋದಯ ಸ್ವಸಹಾಯ ಗಂಪುಗಳಿಗೆ ಆರ್ಥಿಕ ಸೌಲಭ್ಯ ಒದಗಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಜನಸುರಕ್ಷಾ ಯೋಜನೆಯನ್ನು ಮನೆ ಮನೆಗೆ ತಲುಪಿಸುವುದರಲ್ಲಿ ಹೆಚ್ಚು ಮುತುವರ್ಜಿ ವಹಿಸಿರುವುದು ಶ್ಲಾನಾರ್ಹ ಎಂದು ಕೆರ್ಗಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿ ಪೂಜಾರಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆ ವತಿಯಿಂದ ಕೆರ್ಗಾಲ್ ಗ್ರಾಮ ಪ್ರಂಚಾಯಿತಿ ವಠಾರದಲ್ಲಿ ನಡೆದ ಜನಸುರಕ್ಷಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ಉಪ್ಪುಂದ ಶಾಖಾ ವ್ಯವಸ್ಥಾಪಕ ಜಿ.ಶಂಕರ ಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರದ ಜನಸುರಕ್ಷಾ ಯೋಜನೆಯನ್ನು ಕೆರ್ಗಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಬ್ಬ ನಾಗರಿಕರು ಆಳವಡಿಸಿಕೊಳ್ಳಬೇಕೆಂದು ಮನವಿ ವಾಡಿದರು.

ಪಂಚಾಯಿತಿ ಕಾರ್ಯದರ್ಶಿ ಜಯ ಖಾರ್ವಿ, ಸದಸ್ಯ ವಿನೋದ ದೇವಾಡಿಗ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಪಂಚಾಯಿತಿ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆ ಸಿಬ್ಬಂದಿ ಹಾಜರಿದ್ದರು. ಚೈತ್ರಾ ಪ್ರಾರ್ಥಿಸಿದರು. ಗೋಪಾಲ ಪೂಜಾರಿ ವಂದಿಸಿದರು. ಸುನೀತಾ ದೇವಾಡಿಗ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net