ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅದ್ಯತೆ

Published on

ಹುಲ್ಲಹಳ್ಳಿ : ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅದ್ಯತೆ ನೀಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ 1 ಕೋಟಿ ರೂ. ವೆಚ್ಚದ ಸೋಪಾನಕಟ್ಟೆ ನಿರ್ಮಾಣಕ್ಕೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.


ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅನುದಾನ ತಂದು ಪ್ರತಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಏನೇ ಕಾಮಗಾರಿ ಇದರೂ ನನ್ನ ಗಮನಕ್ಕೆ ತರಬಹುದು. ಎಲ್ಲವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುತ್ತೇನೆ ಎಂದರು.


ಗ್ರಾಮಸ್ಥರು ಕಾಮಗಾರಿ ನಡೆಯುವಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಕಾಮಗಾರಿ ಉತ್ತಮವಾಗಿ ನಡೆಯುವುದನ್ನು ನೋಡಿಕೊಳ್ಳಬೇಕು. ಅದೇ ರೀತಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚನೆ ನೀಡಿದರು.


ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠನಾಯಕ, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಕೆ.ಮಾರುತಿ, ಗ್ರಾಪಂ ಅಧ್ಯಕ್ಷೆ ದೇವಮ್ಮ, ಮುಖಂಡರಾದ ಕೆ.ಮಾದಪ್ಪ, ಶಿವನಂಜನಾಯಕ, ತರಗನಹಳ್ಳಿ ನಂಜುಂಡಸ್ವಾಮಿ, ಚಾಮರಾಜು, ಮಲ್ಲೇಶ್, ಅಭಿನಂದನ್ ಪಾಟೀಲ್, ಶಿವಪ್ಪದೇವರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net