ಹೆಸರುಕಾಳು ಖರೀದಿ ಹೆಚ್ಚಳ

Published on

ಹುಬ್ಬಳ್ಳಿ: ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

2024 -25ರ ಖಾರೀಫ್ ಋತುವಿನಲ್ಲಿ ಬೆಂಬಲ ಬೆಲೆಯಲ್ಲಿ ಒಟ್ಟು 38,320 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಅವಕಾಶ ಕಲ್ಪಿಸಿದಂತಾಗಿದೆ.

ಈ ಮೊದಲು 22215 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಸೂಚಿಸಿತ್ತು. ಇದನ್ನು 38,320 ಮೆ.ಟನ್ ಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ರಾಜ್ಯದ ಹೆಸರು ಬೆಳೆಗಾರರಿಗೆ ಹೆಚ್ಚು ಅನುಕೂಲವಾಗಲಿದೆ. ಹೆಚ್ಚುವರಿಯಾಗಿ 16105 ಮೆ. ಟನ್ ಹೆಸರು ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಜೋಶಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net