ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ಕೇಂದ್ರ

greengram
Published on

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ 2024-25ನೇ ಸಾಲಿನ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳನ್ನು ಖರೀದಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.

     ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹಾಗೂ ಎಫ್.ಪಿ.ಓಗಳ ಮುಖಾಂತರ ಹೆಸರು ಕಾಳನ್ನು ಪ್ರತಿ ಕ್ವಿಂಟಾಲ್‌ಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ 8682 ರೂ.ಗಳ ಇದ್ದು, ಪ್ರತಿಯೊಬ್ಬ ರೈತರಿಂದ ಎಕೆರೆಗೆ 2 ಕ್ವಿಂಟಾಲ್ ರಂತೆ ಗರಿಷ್ಠ 10 ಕ್ವಿಂಟಲ್ ಹೆಸರು ಕಾಳು ಖರೀದಿಸುವ ಸಂಬAಧ, ಜಿಲ್ಲೆಯಲ್ಲಿ ಯಾದಗಿರಿ, ಹತ್ತಿಕುಣಿ, ಅಲ್ಲಿಪುರ, ಗುರುಮಠಕಲ್, ಎಲೇರಿ, ಸೈದಾಪೂರ, ಚಪೇಟ್ಲಾ, ಶಹಾಪೂರ, ಬೆಂಟೆಬೆAಬಳಿ, ಸುರಪುರ, ಕೆಂಭಾವಿ-1 ಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ. ನೊಂದಣಿ ಕಾಲಾವಧಿಯನ್ನು 45 ದಿನ ಹಾಗೂ ನೊಂದಣಿಯೊAದಿಗೆ ಖರೀದಿ ಪ್ರಕ್ರೀಯೆಯು 90 ದಿನಗಳ ವರೆಗೆ ನಿಗದಿಪಡಿಸಲಾಗಿರುತ್ತದೆ. ಪ್ರಯುಕ್ತ ಜಿಲ್ಲೆಯ ರೈತ ಭಾಂದವರು ಕೂಡಲೇ ಖರೀದಿ ಕೇಂದ್ರಗಳಿಗೆ ತೆರಳಿ ಸರದಿಯ ಪ್ರಕಾರ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು, ತಮ್ಮ ಹುಟ್ಟುವಳಿಯನ್ನು ಮಾರಾಟ ಮಾಡಿ ಸರ್ಕಾರದ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net