ಆಕ್ಸಿಜನ್ ಪ್ರಮಾಣ ಹೆಚ್ಚಿಸಲು ಹಸಿರು ಜೀವ ಅವಶ್ಯ

kota (1)
Published on

ಕೋಟ: ಪರಿಸರದಲ್ಲಿ ಆಕ್ಸಿಜನ್ ಪ್ರಮಾಣ ಹೆಚ್ಚಿಸಬೇಕು. ಅದಕ್ಕಾಗಿ ಗಿಡ ನಡುವ ಕಾಯಕಕ್ಕೆ ವೇಗ ನೀಡಿ ಎಂದು ಪಾಂಡೇಶ್ವರದ ಯೋಗ ಗುರುಕುಲದ ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಕರೆ ನೀಡಿದರು.

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯೋಜನೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಕೋಟ ಹಂದಟ್ಟು ಮಹಿಳಾ ಬಳಗ, ಮಣೂರು ಗೀತಾನಂದ ಫೌಂಡೇಶನ್, ಪೇತ್ರಿ ಅನ್ನಪೂರ್ಣ ನರ್ಸರಿ, ಕೋಟ ಸಮುದ್ಯತಾ ಗ್ರೂಪ್ಸ್, ಬ್ರಹ್ಮಾವರ ಸುವರ್ಣ ಎಂಟರ್ ಪ್ರೈಸಸ್ ಸಹಭಾಗಿತ್ವದಲ್ಲಿ 263ನೇ ಭಾನುವಾರ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಖ್ಯಾತ ಚಲನಚಿತ್ರ ನಟ ಎಸ್.ದೊಡ್ಡಣ್ಣ, ಸಾಮಾಜಿಕ ಜಾಲತಾಣದ ಮೂಲಕ ಪ್ರಕೃತಿ ಸಂದೇಶ ನೀಡಿದರು. ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶಾಂತಾ ಭಟ್, ಉಪಾಧ್ಯಕ್ಷೆ ಜೂಡಿತ್ ಪಿಕಾರ್ಡೊ, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಮಾಜಿ ಅಧ್ಯಕ್ಷ ಅರವಿಂದ ಶರ್ಮ,ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಸಿಇಒ ಶ್ಯಾಮಲಾ ಪಾಂಡೇಶ್ವರ, ಸಹಾಯಕಿ ಸುಜಾತ ವೆಂಕಟೇಶ ಉಪಸ್ಥಿತರಿದ್ದರು. ಮಹೇಶ್ ಬೆಳಗಾವಿ ಸ್ವಾಗತಿಸಿದರು. ಮಹಿಳಾ ಮಂಡಲ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿದರು. ಮಾಜಿ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net