

ಬೆಂಗಳೂರು ಗ್ರಾಮಾಂತರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ ಯೋಜನೆಯ ಕುರಿತ ಯೋಜನೆಗಳ ಅರಿವು ಮೂಡಿಸುವ ನಿಟ್ಟಿನಲ್ಲಿ ವೈದ್ಯಕೀಯ ಉಚಿತ ತಪಾಸಣಾ ವಾಹನಕ್ಕೆ ಚಾಲನೆ ನೀಡಲಾಗಿದೆ ಎಂದು ಪ್ರಧಾನ ಜಿಲ್ಲಾ ಕಾನೂನು ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಎಂ.ಎಲ್.ರಘನಾಥ್ ತಿಳಿಸಿದರು.
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವೈದ್ಯಕೀಯ ತಪಾಸಣಾ ವಾಹನಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಇ-ಶ್ರಮ್, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ, ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಕುರಿತ ಯೋಜನೆಗಳ ಅರಿವು ಮೂಡಿಸುವ ವಾಹನಕ್ಕೆ ಚಾಲನೆ ನೀಡಿರುವುದಾಗಿ ತಿಳಿಸಿದರು.