ಹೆಣ್ಣು ಮಗು ಜನಿಸಿದಾಗ ಸಂತೋಷದಿಂದ ಸ್ವಾಗತಿಸಿ

11kgl-2..
ಕೊಳ್ಳೇಗಾಲ ಪಟ್ಟಣದಲ್ಲಿ ಬುಧವಾರ ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು. ಎಂ.ಆನಂದ್, ಎಂ.ಎನ್.ನಂದಿನಿ, ಬಸವರಾಜ, ನಂಜಮಣ್ಣಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
Published on

ಕೊಳ್ಳೇಗಾಲ: ಹೆಣ್ಣು ಜೀವನದ ಉದ್ದಕ್ಕೂ ಹಲವು ಪಾತ್ರಗಳನ್ನು ನಿರ್ವಹಿಸುತ್ತಾಳೆ. ಈ ಮೂಲಕ ಕುಟುಂಬದ ಆಧಾರ ಸ್ತಂಭವಾಗಿರುತ್ತಾಳೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆನಂದ್ ತಿಳಿಸಿದರು.

ಪಟ್ಟಣದ ಜೆಎಸ್‌ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜೆಎಸ್‌ಎಸ್ ಮಹಿಳಾ ಕಾಲೇಜು ಸಹಯೋಗದಲ್ಲಿ ಬುಧವಾರ ಆಯೋಜಿಸದ್ದ ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಣ್ಣು ಮಗು ಜನಿಸಿದಾಗ ಸಂತೋಷದಿಂದ ಸ್ವಾಗತಿಸಬೇಕು. ಅಂತೆಯೆ ಅವರಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವುದು ಎಲ್ಲರ ಹೊಣೆಯಾಗಿದೆ. ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಮಾಡಲಾಗುತ್ತಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಂ.ಎನ್.ನಂದಿನಿ ಮಾತನಾಡಿ, ದೇಶದ ಕೆಲವೆಡೆ ಇಂದಿಗೂ ಲಿಂಗ ತಾರತಮ್ಯ ತಾಂಡವವಾಡುತ್ತಿದೆ. ಯುವತಿಯರು ದಬ್ಬಾಳಿಕೆ, ಲಿಂಗ ತಾರತಮ್ಯಕ್ಕೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಿರುವುದು ದೌರ್ಭಾಗ್ಯ ಎಂದು ಬೇಸರ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಜಾಗೃತಿ ಮೆರವಣಿಗೆ ಪಟ್ಟಣದ ತಾಪಂ ಆವರಣದಿಂದ ಪ್ರಮುಖ ರಸ್ತೆಗಳಲ್ಲಿ ಸಾಗಿ ಜೆಎಸ್‌ಎಸ್ ಮಹಿಳಾ ಕಾಲೇಜು ತಲುಪಿತು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಕರಪತ್ರ ಹಂಚುವ ಮೂಲಕ ಹೆಣ್ಣು ಮಕ್ಕಳ ಬಗ್ಗೆ ಅರಿವು ಮೂಡಿಸಿದರು.

ಹಿರಿಯ ವಕೀಲ ಡಿ.ವೆಂಕಟಾಚಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಸಿ.ಇ.ನಂಜಮಣಿ, ಜೆಸ್‌ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಪ್ರಭು, ವಕೀಲರ ಸಂಘದ ಅಧ್ಯಕ್ಷ ಡಿ.ಎಸ್.ಬಸವರಾಜು, ಉಪಾಧ್ಯಕ್ಷೆ ಸೀಮಾ ತಹಸೀನ್ ಸುಲ್ತಾನಾ, ಜಿಲ್ಲಾ ಮಕ್ಕಳ ಸಹಾಯವಾಣಿಯ ಮಹೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net