

ನಾಗಮಂಗಲ: ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಡಿ.11ರಂದು ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರು ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡುತ್ತಿದ್ದರೆ ಹಾಗೂ ಭ್ರಷ್ಟಾಚಾರದ ಬಗ್ಗೆ ತಾಲೂಕಿನ ಸಾರ್ವಜನಿಕರು ಅಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಲೋಕಾಯುಕ್ತ ಅಧಿಕಾರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಸುರೇಶ್‌ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.